ಚಳ್ಳಕೆರೆ : ಇನ್ನೂ ನಿನ್ನೆಯಿಂದ ರಾಜ್ಯಾಂದ್ಯಾAತ ಪ್ರಾರಂಗೊAಡ ಶಾಲೆಗಳಿಗೆ ಶಿಕ್ಷಕರು ಮಕ್ಕಳನ್ನು ಸೆಳೆಯಲು ವಿವಿಧ ರೀತಿಯಲ್ಲಿ ಶಾಲಾ ಪ್ರಾರಂಭವೋತ್ಸವ ಕಾರ್ಯಕ್ರಮ ಆಮ್ಮಿಕೊಂಡಿದ್ದಾರೆ.
ಅದರAತೆ ತಾಲೂಕಿನ ಗೌರಸಮುದ್ರ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವವನ್ನು ಎತ್ತಿನಗಾಡಿಯನ್ನು ಸಿಂಗಾರ ಮಾಡಿ ಎತ್ತಿನ ಗಾಡಿ ಒಳಗೆ ಮಕ್ಕಳನ್ನು ಕೂರಿಸಿಕೊಂಡು ಮೆರವಣಿಗೆಯ ಮೂಲಕ ಮಕ್ಕಳನ್ನು ಶಾಲೆಗೆ ಕರೆ ತರಲಾಯಿತು
ಇನ್ನೂ ಊರಿನ ಪ್ರಮುಖ ಬೀದಿಯಲ್ಲಿ ಸಂಚರಿಸಿ ಮಕ್ಕಳನ್ನು ಶಾಲೆಗೆ ಕಳುಹಿಸಿಕೊಡಿ ಮಕ್ಕಳನ್ನು ಶಾಲೆಗೆ ಸೇರಿಸಿ ಮಕ್ಕಳಿಗೆ ಆಸ್ತಿಯನ್ನು ಮಾಡಬೇಡಿ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂದು ಪಾಲಕರಲ್ಲಿ ವಿನಂತಿಸುತ್ತಾ ಬೀದಿ ಬೀದಿಯಲ್ಲಿ ವಿದ್ಯಾರ್ಥಿಗಳು ಮಕ್ಕಳನ್ನು ಶಾಲೆಗೆ ಸೇರಿಸಿ ಎಂದು ಘೋಷಣೆಗಳನ್ನು ಕೂಗುತ್ತಾ ವಿಭಿನ್ನ ರೀತಿಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಮಕ್ಕಳಿಗೆ ಉಚಿತವಾಗಿ ಪಠ್ಯಪುಸ್ತಕಗಳು ಮತ್ತು ಸಮವಸ್ತ್ರಗಳನ್ನು ವಿತರಣೆ ಮಾಡಲಾಯಿತು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಭಾಗ್ಯಮ್ಮ, ಎಸ್‌ಡಿಎಂಸಿ ಅಧ್ಯಕ್ಷರಾದ ಜಿಬಿ ರಾಜಶೇಖರ್, ಶಾಲೆಯ ಮುಖ್ಯೋಪಾಧ್ಯಾಯರಾದ ಪುರುಷೋತ್ತಮ್ ಹಾಗೂ ಗ್ರಾಮ ಪಂಚಾಯತಿ ಸದಸ್ಯರಾದ ಟಿ ಶಶಿಕುಮಾರ್, ಶಿಕ್ಷಕರಾದ ಮಾರುತಿ, ಈಶ್ವರ್, ತಿಪ್ಪೇಸ್ವಾಮಿ. ನಾಗಭೂಷಣ್. ಚೈತ್ರ. ಸುನೀತಾ ಇತರರು ಹಾಜರಿದ್ದರು.

About The Author

Namma Challakere Local News
error: Content is protected !!