ಚಿತ್ರದುರ್ಗ : ನಗರದ ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗಾಗಿ “ಮಹಿಳೆಯರ ಮತ್ತು ಮಕ್ಕಳ ಮೇಲಿನ ಲೈಂಗಿಕ ಶೋಷಣೆ, ಸೈಬರ್ ಕ್ರೆöÊಂ ಕುರಿತಾದ ಜಾಗೃತಿ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಾ.ಭರತ್ ಪಿ ಬಿ ಮಾತನಾಡಿ, ಮಹಿಳೆಯರು ಎಲ್ಲಾ ಕ್ಷೇತ್ರಗಳನ್ನು ತಮ್ಮನ್ನು ತೊಡಗಿಸಿಕೊಂಡು ವಿವಿಧ ವೃತ್ತಿಗಳಲ್ಲಿ ಸಾಧನೆ ತೋರಿದ್ದಾರೆ. ಎಲ್ಲಾ ಕ್ಷೇತ್ರಗಳು ಲಿಂಗ ತಾರತಮ್ಯದಿಂದ ಹೊರತಾದಾಗ ಮಾತ್ರ ಅಭಿವೃದ್ಧಿ ಕಾಣಲು ಸಾಧ್ಯ. ತಂತ್ರಜ್ಞಾನದ ಜೊತೆಗೆ ಸೈಬರ್ ಅಪರಾಧಗಳು ಹೆಚ್ಚಾಗುತ್ತಿವೆ. ಸಾರ್ವಜನಿಕರು ಸೈಬರ್ ಕ್ರೆöÊಂಗಳಿಗೆ ಹಣ ಕಳೆದುಕೊಳ್ಳುತ್ತಿದ್ದಾರೆ. ಮಹಿಳೆಯರ ಮೇಲಿನ ಶೋಷಣೆಗಳು ಹಾಗೂ ಸೈಬರ್ ಅಪರಾಧ ತಡೆಗಟ್ಟಲು ನಾವು ಹೆಚ್ಚಿನ ಜಾಗೃತಿಯನ್ನು ಮೂಡಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ನಮ್ಮ ವಿದ್ಯಾಲಯದಲ್ಲಿ ಸೈಬರ್ ಅಪರಾಧಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪೊಲೀಸ್ ಇಲಾಖೆಯವರು ಆಗಮಿಸಿ ನಮ್ಮ ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿರುವುದಕ್ಕೆ ನಾವು ಪೊಲೀಸ್ ಇಲಾಖೆಗೆ ಅಭಾರಿಯಾಗಿದ್ದೇವೆ ಎಂದು ತಿಳಿಸಿದರು.
ಕೋಟೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀ ನವೀನ್ ಎಂ ಹೆಚ್ ಮಾತನಾಡಿ, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಹೆಚ್ಚಿನ ಜಾಗೃತಿ ವಹಿಸಬೇಕು. ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳುವಾಗ ಜಾಗರೂಕರಾಗಿರಬೇಕು. ಆನ್‌ಲೈನ್ ವಂಚನೆಯ ಬಗ್ಗೆ ಸ್ಥಳೀಯ ಸೈಬರ್ ಠಾಣೆಗೆ ಶೀಘ್ರವಾಗಿ ಮಾಹಿತಿ ನೀಡಿದಲ್ಲಿ ಅಪರಾಧಿಗಳನ್ನು ಸುಲಭವಾಗಿ ಪತ್ತೆ ಹಚ್ಚಬಹುದು. ಮೊಬೈಲ್ ಕಳೆದುಹೋದಲ್ಲಿ ಐಎಂವಿ ನಂಬರ್ ಬಗ್ಗೆ ಮಾಹಿತಿ ಇದ್ದಲ್ಲಿ ಆ ಮೂಲಕ ಶೀಘ್ರವಾಗಿ ಕಳೆದುಹೋದ ಮೊಬೈಲ್ ಹುಡುಕಬಹುದು. ಸರಗಳ್ಳತದ ಬಗ್ಗೆ ಮಹಿಳೆಯರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದರು.
ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊ.ಬಸಂತಕುಮಾರಿ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರುಗಳ ಪಾತ್ರ ಬಹು ಮುಖ್ಯವಾದುದು. ಇಂಜಿನಿಯರಿAಗ್ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಿನ ಸಾಧನೆ ತೋರುತ್ತಿರುವುದು ಮಹಿಳೆಯರ ಹೆಗ್ಗಳಿಕೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಡಾ.ಲೋಕೇಶ್ ಹೆಚ್ ಜೆ, ಪ್ರೊ. ಶೃತಿ ಎಂ ಕೆ, ಪ್ರೊ. ಸುಷ್ಮಿತಾದೇಬ್ ಕಾರ್ಯಕ್ರಮ ಸಂಚಾಲಕಿ ಪ್ರೊ.ಸುಧಾ ಟಿ, ಪ್ರೊ.ಮಧುಕುಮಾರ್ ದಾವಣಗೆರೆ, ಪ್ರೊ.ತನುಜಾ ಟಿ ಹಾಗೂ ಕೋಟೆ ಪೊಲೀಸ್ ಠಾಣೆ ಸಿಬ್ಬಂದಿಗಳಾದ ಸುನಿಲ್ ಜೆ, ಕಲಾಶ್ರೀ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರೊ.ಸುಧಾ.ಟಿ ಸ್ವಾಗತಿಸಿ, ರಕ್ಷಿತಾ ಪ್ರಾರ್ಥಿಸಿ, ಸುನಿಲ್ ಜೆ ವಂದಿಸಿದರು.

Namma Challakere Local News
error: Content is protected !!