ಚಳ್ಳಕೆರೆ : ಬಯಲು ಸೀಮೆಯಲ್ಲಿ ಶಿಕ್ಷಣ ನೀಡಲು ಕೆಲವು ಶಿಕ್ಷಣಾಸಕ್ತರು ತಾ ಮುಂದು ನೀ ಮುಂದು ಎಂದು ಶಿಕ್ಷಣ ಸಂಸ್ಥೆಗಳು ತೆರೆಯುವುದು ಒಳ್ಳೆಯ ಉದ್ದೇಶ ಆದರೆ ಸರ್ಕಾರದ ಯಾವುದೇ ಪರವಾನಗಿ ಪಡೆಯದೆ ಸರ್ಕಾರದ ಮಾನದಂಡಗಳನ್ನು ಪರಿಗಣಿಸದೆ ಖಾಸಗಿ ವಿದ್ಯಾಸಂಸ್ಥೆಗಳು ಶಿಕ್ಷಣ ನೀಡುವುದು ಮಕ್ಕಳ ಭವಿಷ್ಯದ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೇಟ್ಟಿ ಬಣದ ಚಳ್ಳಕೆರೆ ತಾಲ್ಲೂಕು ಸಂಘದ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ನೀಡಿ ಆಕ್ರೋಶ ಹೊರಹಾಕಿದ್ದಾರೆ.
ಇನ್ನೂ ನಗರದ ಕ್ಷೇತ್ರ ಶೀಕ್ಷಣಾಧಿಕಾರಿಗಳ ಕಛೆರಿ ಮುಂದೆ ರಕ್ಷಣಾ ವೇದಿಕೆ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ರವರಿಗೆ ಮನವಿ ಸಲ್ಲಿಸಿ ಮಾತನಾಡಿದ ತಾಲೂಕು ಅಧ್ಯಕ್ಷ ಪಿ.ಮಂಜುನಾಥ್, ತಾಲ್ಲೂಕಿನಲ್ಲಿ ಇರುವ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳು ದುಬಾರಿ ಶುಲ್ಕವನ್ನು ಕಟ್ಟಿಸಿಕೊಳ್ಳುತ್ತಿದ್ದಾರೆ ಇದರಿಂದ ಸರ್ಕಾರದ ಮಾರ್ಗಸೂಚಿ ಅನ್ವಯ ಯಾವ ಸಂಸ್ಥೆಗಳು ಪಾಲನೆ ಮಾಡುತ್ತಿಲ್ಲ, ಇದರಿಂದ ಮಕ್ಕಳ ಭವಿಷ್ಯದ ಮೇಲೆ ಚೆಲ್ಲಾಟವಾಡದೆ ಶಿಕ್ಷಣ ಇಲಾಖೆ ಸೂಕ್ತ ಶಿಸ್ತು ಕ್ರಮ ವಹಿಸಬೇಕು, ಎಲ್ಲಾ ಖಾಸಗಿ ಶಾಲೆಗಳ ಮುಂದೆ ಸೂಚನಾ ಫಲಕದಲ್ಲಿ ನಿಗಧಿತ ಶುಲ್ಕದ ವಿವರನ್ನು ನಮೂದಿಸಬೇಕು ಎಂದು ಮನವಿ ಸಲ್ಲಿಸಿದರು.
ಇನ್ನೂ ಮನವಿ ಸ್ವೀಕರಿಸಿದ ಬಿಇಓ ಕೆ.ಎಸ್.ಸುರೇಶ್ ರವರು ನಿಮ್ಮ ಮನವಿಯನ್ನು ಸ್ವೀಕರಿಸಿದ್ದೆನೆ ತಾಲೂಕಿನಲ್ಲಿ ಇರುವ ಎಲ್ಲಾ ಅನುದಾನ ರಹಿತ ಶಾಲೆಗಳಿಗೆ ನಮ್ಮ ಶಿಕ್ಷಣ ಇಲಾಖೆಯಲ್ಲಿ ತಂಡಗಳನ್ನು ರಚಿಸಿ ಎಲ್ಲಾ ಶಾಲೆಗಳಿಗೆ ಬೇಟಿ ನೀಡಿ ಶಿಕ್ಷಣ ಇಲಾಖೆ ಸೂಚಿಸಿದ ಶುಲ್ಕಕ್ಕಿಂತ ಹೆಚ್ಚಿಗೆ ವಸೂಲಾತಿ ಕಂಡ ಬಂದರೆ ಶಿಸ್ತುಕ್ರಮ ಕೈಗೊಳ್ಳಾಲಾಗುವುದು ಎಂದು ಹೇಳಿದರು.
ಇದೇ ಸಂಧರ್ಭದಲ್ಲಿ ತಾಲೂಕು ಅಧ್ಯಕ್ಷ ಪಿ.ಮಂಜುನಾಥ್, ಪ್ರದಾನ ಕಾರ್ಯಧರ್ಶಿ ರಾಜಣ್ಣ, ಓಬಯ್ಯ, ನಾಗರಾಜು, ಲಿಂಗರಾಜು, ಮಹೇಶ್ ಇತರರು ಪ್ರತಿಭಟನೆಯಲ್ಲಿ ಬಾಗಿಯಾಗಿದ್ದರು.

Namma Challakere Local News
error: Content is protected !!