ಚಿತ್ರದುರ್ಗ ಜೂನ್.09:
ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ವತಿಯಿಂದ 2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ 1 ಮತ್ತು 2ರ ವಿಶೇಷ ವಾರ್ಷಿಕ ಶಿಬಿರವನ್ನು ಜೂನ್ 10 ರಿಂದ 16 ರವರೆಗೆ ಚಿತ್ರದುರ್ಗ ತಾಲ್ಲೂಕಿನ ಕುರುಬರಹಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಜೂನ್ 10ರಂದು ಮಧ್ಯಾಹ್ನ 3ಕ್ಕೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಉದ್ಘಾಟನೆ ನೆರವೇರಿಸುವರು. ಸರ್ಕಾರಿ ಕಲಾ ಕಾಲೇಜು ಪ್ರಾಂಶುಪಾಲ ಪ್ರೊ.ಬಿ.ಟಿ.ತಿಪ್ಪೇರುದ್ರಸ್ವಾಮಿ ಅಧ್ಯಕ್ಷತೆ ವಹಿಸಿವರು ವಿಶೇಷ ಆಹ್ವಾನಿತರಾಗಿ ದಾವಣಗೆರೆ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಸಂಯೋಜನಾಧಿಕಾರಿ ಡಾ. ಅಶೋಕ್ ಕುಮಾರ್ ವಿ. ಪಾಳೇದ, ರಾಷ್ಟ್ರೀಯ ಸೇವಾ ಯೋಜನಾ ಘಟಕ-1ರ ಕಾರ್ಯಕ್ರಮಾಧಿಕಾರಿ ಡಾ. ವಿ. ಪ್ರಸಾದ್ ಪ್ರಾಸ್ತಾವಿಕ ನುಡಿಗಳನ್ನಾಡುವರು. ರಾಷ್ಟ್ರೀಯ ಸೇವಾ ಯೋಜನಾ ಘಟಕ-2ರ ಕಾರ್ಯಕ್ರಮಾಧಿಕಾರಿ ಪ್ರೊ. ಆಶ್ವತ್ಥ ಪ್ರತಿಜ್ಞಾವಿಧಿ ಬೋಧನೆ ಮಾಡುವರು. ನಗರಸಭೆ ಮಾಜಿ ಅಧ್ಯಕ್ಷೆ ತಿಪ್ಪಮ್ಮ ವೆಂಕಟೇಶ್ ಉಪಸ್ಥಿತಿ ವಹಿಸುವರು. ಮುಖ್ಯ ಅತಿಥಿಗಳಾಗಿ ಹುಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಮ್ಮ ಹೆಚ್. ಅಂಜನಮೂರ್ತಿ, ಉಪಾಧ್ಯಕ್ಷೆ ಉಮಾದೇವಿ ವಿ. ಬಸಣ್ಣ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಮತ್ತಿತರರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.


Namma Challakere Local News
error: Content is protected !!