ಚಿತ್ರದುರ್ಗ ಜೂನ್.13:
ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಹಾಗೂ ಬೆಂಗಳೂರು ಹೋಟಲ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ಇದೇ ಜೂನ್ 15ರಂದು ಬೆಳಿಗ್ಗೆ 9.30ಕ್ಕೆ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಡೈರಿ ಸರ್ಕಲ್, 4ನೇ ಮಹಡಿಯ ಕಲ್ಯಾಣ ಸುರಕ್ಷಾ ಭವನದ ಕೆ.ಎಸ್.ಡಿ.ಸಿ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಸ್ಟೀವರ್ಡ್, ಕ್ಯಾಪ್ಟನ್, ಅಡುಗೆ ಸಹಾಯಕ, ಮಾಣಿ, ಮೇಲ್ವಿಚಾರಕ, ಬಾಣಸಿಗ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಎಸ್‍ಎಸ್‍ಎಲ್‍ಸಿ, ಪಿಯುಸಿ, ಡಿಪ್ಲೋಮಾ ಪಾಸ್ ಅಥವಾ ಅನುತೀರ್ಣ ಅಥವಾ ಆಸಕ್ತರು ಯಾರಾದರೂ ಭಾಗವಹಿಸಬಹುದು. ಉಚಿತ ವಸತಿ ಮತ್ತು ಊಟ ಸೌಲಭ್ಯವಿದೆ. ಇಎಸ್‍ಐ, ಪಿಎಫ್ ಒದಗಿಸಲಾಗುತ್ತದೆ. ರೂ.13,000/- ದಿಂದ 16,000/- ರೂ ಸಂಬಳ ನೀಡಲಾಗುವುದು. ಬೆಂಗಳೂರಿನಲ್ಲಿ ಕೆಲಸ ಮಾಡಲು ಸಿದ್ದವಿರುವ ವ್ಯಕ್ತಿಗಳನ್ನು ನೇಮಿಸಿಕೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ 9740947779, 9741817779 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ.ಗೋಪಾಲರೆಡ್ಡಿ ತಿಳಿಸಿದ್ದಾರೆ.

About The Author

Namma Challakere Local News
error: Content is protected !!