ಚಿತ್ರದುರ್ಗ ಜೂನ್.13:
ಚಿತ್ರದುರ್ಗದ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ವತಿಯಿಂದ 2023-24 ನೇ ಸಾಲಿನ ವಿಶೇಷ ವಾರ್ಷಿಕ ಶಿಬಿರ ಚಿತ್ರದುರ್ಗ ತಾಲ್ಲೂಕಿನ ಕುರುಬರಹಳ್ಳಿಯಲ್ಲಿ ಹಮ್ಮಿಕೊಂಡಿದ್ದು, ಜೂನ್ 14ರಂದು ಸಂಜೆ 6ಕ್ಕೆ ಕಾನೂನು ಅರಿವು ಕುರಿತು ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.

ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ವಿಜಯ್ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸುವರು. ವಕೀಲರ ಸಂಘದ ಅಧ್ಯಕ್ಷ ಸಿ. ಶಿವು ಯಾದವ್, ಉಪಾಧ್ಯಕ್ಷ ಜೆ.ಸಿ ದಯಾನಂದ, ಪ್ರಧಾನ ಕಾರ್ಯದರ್ಶಿ ಎಂ. ಮೂರ್ತಿ, ಹುಲ್ಲೂರು ಪಂಚಾಯತ್ ಅಭಿವೃದ್ದಿ ಅಧಿಕಾರಿ ಅನಸೂಯಮ್ಮ ಉಪಸ್ಥಿತಿ ವಹಿಸುವರು. ಕುರುಬರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಮುದಸ್ಸಿರಾ ಬಾನು, ಇರ್ಫಾನು ಉಲ್ಲಾ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಮಾಜ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಸಿ ಸುರೇಶ್, ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಸಿ.ವೈ.ಯಶೋಧ, ಸೇರಿದಂತೆ ಪ್ರಾಧ್ಯಾಪಕರು, ಉಪನ್ಯಾಸಕರು ಮತ್ತಿತರರು ಭಾಗವಹಿಸುವರು. ಚಿತ್ರದುರ್ಗ ಪ್ಯಾನಲ್ ವಕೀಲ ಎನ್.ಚಂದ್ರಪ್ಪ ಕಾನೂನು ಅರಿವು ವಿಷಯದ ಕುರಿತು ಉಪನ್ಯಾಸ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

About The Author

Namma Challakere Local News
error: Content is protected !!