ಚಳ್ಳಕೆರೆ : ಬಯಲು ಸೀಮೆಯಲ್ಲಿ ಮಕ್ಕಳನ್ನು ದುಡಿಮೆಗೆ ಹಚ್ಚಬಾರದು. ಮಕ್ಕಳನ್ನು ಕೆಲಸಕ್ಕೆ ಕಳುಹಿಸದೇ ಅವರಿಗೆ ಉತ್ತಮವಾದ ಶಿಕ್ಷಣ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯದೀಶರಾದ ರೇಷ್ಮಾ ಕಲಕಪ್ಪ ಗೋಣಿ ಹೇಳಿದರು.
ನಗರದ ನ್ಯಾಯಾಲಯದ ಆವರಣದಲ್ಲಿ ವಕೀಲರ ಸಂಘ, ಕಾರ್ಮಿಕ ಇಲಾಕೆ, ಶಿಕ್ಷಣ ಇಲಾಕೆ, ಹಾಗೂ ಇತರೆ ಸಂಘ ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದರು,
ಚಿಕ್ಕ ವಯಸ್ಸಿನಲ್ಲಿ ಮಕ್ಕಳು ಕಲಿಬೇಕು ಹೊರೆತು ಗಳಿಸುವುದಕ್ಕೆ ಹೋಗಬಾರದು. ಪೋಷಕರು ಮತ್ತು ಮಕ್ಕಳಲ್ಲಿ ಜಾಗೃತಿ ಮೂಡಿಸಿ ಇಂತಹ ಮಕ್ಕಳನ್ನು ಬಾಲಕಾರ್ಮಿಕ ಪದ್ದತಿಯಿಂದ ಹೊರತರಬೇಕು. ಮಕ್ಕಳು ವಿದ್ಯಾಭ್ಯಾಸ ಕಲಿತು ಮುಖ್ಯವಾಹಿನಿಗೆ ಬರಬೇಕು ಎಂದರು.
ಪ್ರಧಾನ ಸಿವಿಲ್ ನ್ಯಾಯದೀಶರಾದ ಗಾಯಿತ್ರಿ ಎಸ್ ಕಾಟೆ ಮಾತನಾಡಿ, ಮಕ್ಕಳು ಕೆಲಸ ಮಾಡುವ ಸ್ಥಳಗಳು ಕಂಡು ಬಂದರೆ ಕಾರ್ಮಿಕ ಹಾಗೂ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಬಾಲ ಮಕ್ಕಳನ್ನು ದುಡಿಮೆಗೆ ಇಟ್ಟುಕೊಳ್ಳುವುದು ಅಪರಾಧವಾಗಿದೆ ಎಂದರು.
ಕಾರ್ಮಿಕ ಅಧಿಕಾರಿ ಕುಸುಮಾ ಪ್ರಾಸ್ತವಿಕವಾಗಿ ಮಾತನಾಡಿ, ಶಿಕ್ಷಣ ಮಕ್ಕಳ ಮೂಲಭೂತ ಹಕ್ಕು ಇದರಿಂದ ಅವರು ವಂಚಿತರಾಗಬಾರದು. ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆಯ ವರದಿ ಪ್ರಕಾರ ಭಾರತದಲ್ಲಿ 1.2 ಕೋಟಿಗೂ ಹೆಚ್ಚು ಮಕ್ಕಳು ಅಪಾಯಕಾರಿ ದುಡಿಮೆಗಳಲ್ಲಿ ತೊಡಗಿಕೊಂಡಿದ್ದಾರೆ. ಇಂತಹ ಬಾಲಕಾರ್ಮಿಕರನ್ನು ಮುಖ್ಯವಾಹಿನಿಗೆ ತಂದು ಶಿಕ್ಷಣ ಕೊಡಿಸಬೇಕಾದದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಬಾಲ ಕಾರ್ಮಿಕ ಪದ್ದತಿಯನ್ನು ವಿರೋಧಿಸಲು ಸರ್ಕಾರವು ವಿವಿಧ ಕಾನೂನುಗಳನ್ನು ಜಾರಿಗೆ ತಂದಿದೆ ಎಂದು ತಿಳಿಸಿದರು.

ಇದೇ ಸಂಧರ್ಭದಲ್ಲಿ ಅಪರ ಸಿವಿಲ್ ನ್ಯಾಯದೀಶರಾದ ಗೌಡ ಜಗದೀಶ್ ರುದ್ರೆ, ವಕೀಲರ ಸಂಘದ ಅಧ್ಯಕ್ಷ ಜಿ.ಆನಂದಪ್ಪ, ಕ್ಷೇತ್ರ ಶೀಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಇತರರು ಇದ್ದರು.

Namma Challakere Local News
error: Content is protected !!