ಚಿತ್ರದುರ್ಗ
ಜೂನ್.17:
ಯುವ ಕಾರ್ಯಕ್ರಮ ಹಾಗೂ ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಚಿತ್ರದುರ್ಗ ನೆಹರು ಯುವ ಕೇಂದ್ರ, ಸರ್ಕಾರಿ ಕಲಾ ಕಾಲೇಜು (ಸ್ವಾಯುತ್ತ) ಮತ್ತು ಸರ್ಕಾರಿ ವಿಜ್ಞಾನ ಕಾಲೇಜು ಇವರ ಸಹಯೋಗದೊಂದಿಗೆ ಇದೇ ಜೂನ್ 19ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರ್ಕಾರಿ ಕಲಾ ಕಾಲೇಜಿನ ಡಾ. ಬಿ.ಆರ್.ಅಂಬೇಡ್ಕರ್ ಜ್ಞಾನ ಸಭಾಂಗಣದಲ್ಲಿ “ಜಿಲ್ಲಾ ಮಟ್ಟದ ಯುವ ಉತ್ಸವ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು.
ಯೋಜನಾ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಘನ ಉಪಸ್ಥಿತಿ ವಹಿಸುವರು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸಿ ವೀರೇಂದ್ರ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಎನ್.ವೈ. ಗೋಪಾಲಕೃಷ್ಣ, ಟಿ. ರಘುಮೂರ್ತಿ, ಎಂ.ಚಂದ್ರಪ್ಪ, ಬಿ.ಜಿ ಗೋವಿಂದಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ. ವೈ.ಎ. ನಾರಾಯಣಸ್ವಾಮಿ, ಚಿದಾನಂದ ಎಂ. ಗೌಡ, ಕೆ.ಎಸ್ ನವೀನ್ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ವಿ.ರಾಮ್ ಪ್ರಸಾತ್ ಮನೋಹರ್, ನೆಹರು ಯುವ ಕೇಂದ್ರ ಸಂಘಟನೆಯ ಪ್ರಾದೇಶಿಕ ನಿರ್ದೇಶಕ ಎಮ್.ಎನ್. ನಟರಾಜ್, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಭಾಗವಹಿಸುವರು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವಜನಾಧಿಕಾರಿ ಎನ್. ಸುಹಾಸ್ ತಿಳಿಸಿದ್ದಾರೆ.

About The Author

Namma Challakere Local News
error: Content is protected !!