ಚಿತ್ರದುರ್ಗ ಜೂನ್.16:
2023-24ನೇ ಸಾಲಿನ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಂದ ಆನ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಇಲಾಖೆ ವೆಬ್‍ಸೈಟ್ tw.kar.nic.in ಮೂಲಕ ಅರ್ಜಿಯನ್ನು ಸಲ್ಲಿಸಿ ಸಲ್ಲಿಸಿದ ಅರ್ಜಿಯನ್ನು ಚಿತ್ರದುರ್ಗ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಗೆ ಇದೇ ಜೂನ್ 22ರ ಸಂಜೆ 5.30 ರೊಳಗೆ ಸಲ್ಲಿಸಬೇಕು.
ಷರತ್ತುಗಳು: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪರಿಶಿಷ್ಟ ವರ್ಗಕ್ಕೆ ಸೇರಿದವರಾಗಿರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಕಾನೂನು ಪದವಿಯನ್ನು ಪಡೆದು 2 ವರ್ಷ ಮೀರಿರಬಾರದು, ಬಾರ್ ಕೌನ್ಸಿಲಿಂಗ್‍ನ ಖಾಯಂ ಸದಸ್ಯತ್ವ ಪ್ರಮಾಣ ಪತ್ರ ಸಲ್ಲಿಸಬೇಕು ಹಾಗೂ ತರಬೇತಿಯನ್ನು ಚಿತ್ರದುರ್ಗ ಜಿಲ್ಲೆಯಲ್ಲಿಯೇ ಪಡೆಯಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು ಅಭ್ಯರ್ಥಿಗಳು ವಯಸ್ಸು 40ಕ್ಕೆ ಮೀರಿರಬಾರದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಸರ್ಕಾರದ ಆದೇಶದನ್ವಯ ಶಿಷ್ಯವೇತನವನ್ನು ನೀಡಲಾಗುವುದು, ಆಯ್ಕೆಯಾದ ಅಭ್ಯಥಿಗಳು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಸರ್ಕಾರಿ ವಕೀಲರು ಅಥವಾ 20 ವರ್ಷಗಳ ಕಾಲ ಕಡಿಮೆ ಇಲ್ಲದೆ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸಿರುವ ನ್ಯಾಯವಾದಿಗಳ ಬಳಿ ತರಬೇತಿಯನ್ನು ಹಾಗೂ ಯಾರ ಬಳಿ ತರಬೇತಿಯನ್ನು ಪಡೆಯಲು ಇಚ್ಚಿಸುತ್ತೀರಿ ಎಂಬ ಬಗ್ಗೆ ಲಿಖಿತ ರೂಪದಲ್ಲಿ ತಿಳಿಸಬೇಕು. ತರಬೇತಿ ಅವಧಿಯು 2 ವರ್ಷವಿದ್ದು ಆಯ್ಕೆಯಾದ ಅಭ್ಯರ್ಥಿಗಳು ತರಬೇತಿಯನ್ನು ಮಧ್ಯದಲ್ಲಿ ಬಿಡುವಂತಿಲ್ಲ. ಬಂದು ವೇಳೆ ಬಿಟ್ಟರೆ ತರಬೇತಿ ಅವಧಿಯಲ್ಲಿ ಪಡೆದಿರುವ ಶಿಷ್ಯ ವೇತನವನ್ನು ಶೇ.10% ಬಡ್ಡಿಯೊಂದಿಗೆ ಸರ್ಕಾರಕ್ಕೆ ಹಿಂದಿರುಗುಸುವುದಾಗಿ ಮುಚ್ಚಳಿಕೆ ಬರೆದು ಕೊಡಬೇಕು. ಈ ನಿಯಮ ರಾಜ್ಯ ಅಥವಾ ಕೇಂದ್ರ ಸರ್ಕಾರದ ನೌಕರಿ ಪಡೆಯುವವರಿಗೆ ಅನ್ವಯಿಸುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳು ಸುಳ್ಳು ಮಾಹಿತಿ ಹಾಗೂ ಸುಳ್ಳು ದಾಖಲೆಗಳನ್ನು ನೀಡಿ ಆಯ್ಕೆಯಾಗಿ ಶಿಷ್ಯವೇತನ ಪಡೆದರೆ ಅಂತಹ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಪಡೆದ ಶಿಷ್ಯವೇತನವನ್ನು 10% ಬಡ್ಡಿಯೊಂದಿಗೆ ಸರ್ಕಾರಕ್ಕೆ ಹಿಂದಿರುಗಿ ಕಟ್ಟಬೇಕು ತಪ್ಪಿದರೆ ಭೂ ಕಂದಾಯ ಬಾಕಿ ವಸೂಲಿಯಂತೆ ವಸೂಲಿ ಮಾಡಲಾಗುವುದು, ಆಯ್ಕೆಯಾದ ಅಭ್ಯರ್ಥಿಗಳು ನಿಗಧಿತ ದಿನಾಂಕದೊಳಗೆ ಹಾಜರಾಗದಿದ್ದರೆ ಅಂತಹವರ ಆಯ್ಕೆಯನ್ನು ರದ್ದು ಪಡಿಸಲಾಗುವುದು, ಪರಿಶಿಷ್ಟ ವರ್ಗದ ಕಾನೂನು ಪದವೀಧರರ ವಾರ್ಷಿಕ ವರಮಾನ ಮೊತ್ತ ರೂ. 2 ಲಕ್ಷ ಒಳಗಡೆ ಇರಬೇಕು. ಅರ್ಜಿಯೊಂದಿಗೆ ಸಲ್ಲಿಸಿರುವ ಎಲ್ಲಾ ದಾಖಲಾತಿಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ಧೃಢೀಕರಿಸಬೇಕು, ತಪ್ಪಿದ್ದಲ್ಲಿ ಅಂತ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.