ಚಿತ್ರದುರ್ಗ ಜೂನ್.16:
ಸಿಇಟಿ ಮತ್ತು ಎನ್‍ಇಇಟಿ ಮೂಲಕ ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ಅರಿವು ಯೋಜನೆಯಡಿ ಶೈಕ್ಷಣಿಕ ಸಾಲ ನೀಡಲಾಗುವುದು.
ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಬೌದ್ಧ, ಸಿಖ್, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಸಮುದಾಯಕ್ಕೆ ಸೇರಿದ ಮತೀಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳು 2023-24 ನೇ ಸಾಲಿಗೆ ಶೈಕ್ಷಣಿಕ ಸಾಲ ಪಡೆಯಲು ಇಲಾಖೆ ವೆಬ್‍ಸೈಟ್ kmdconline.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಪ್ರಿಂಟ್ ಕಾಪಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಚೇರಿಗೆ ನೀಡಬೇಕು.
ಆಸಕ್ತ ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಭರ್ತಿ ಮಾಡಿದ ಅರ್ಜಿಯ ನಕಲು ಪ್ರತಿಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಐಡಿ ಕಾರ್ಡ್, ಪಡಿತರ ಚೀಟಿ, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ, ಸಿಇಟಿ ಮತ್ತು ಎನ್‍ಇಇಟಿ ಪ್ರತಿಗಳು, ಹಾಲ್ ಟಿಕೆಟ್, ನೋಟರಿಯೊಂದಿಗೆ ನಷ್ಟ ಪರಿಹಾರ ಬಾಂಡ್ ದಾಖಲೆಗಳನ್ನು ಕೌನ್ಸಿಲಿಂಗ್ ನಡೆಯುವರೆಗೆ ನಿಮಗದ ಕಚೇರಿಗೆ ಸಲ್ಲಿಸಿದ್ದಲ್ಲಿ, ನಿಗಮದಿಂದ ವಿದ್ಯಾರ್ಥಿಗಳು ಭರಿಸಬೇಕಾದ ಬೋಧನಾ ಶುಲ್ಕದ ಸಾಲ ಮಂಜೂರು ಮಾಡಿ, ವ್ಯಾಸಂಗ ಮಾಡುವ ಕಾಲೇಜಿಗೆ ನೇರವಾಗಿ ಪಾವತಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-226412, 8431669372, 8277944213 ಹಾಗೂ ಕಚೇರಿಯನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.