ಚಳ್ಳಕೆರೆ : ರಾಜ್ಯಾದ್ಯಾಂತ ನಡೆಯುವ ಅನ್ನ ಭಾಗ್ಯ ಅಕ್ಕಿಗಾಗಿ ಕಾಂಗ್ರೇಸ್‌ನಿAದ ಹಮ್ಮಿಕೊಂಡ ಪ್ರತಿಭಟನೆ ಈಡೀ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇಂದು ಜಿಲ್ಲಾ ಕೇಂದ್ರಗಲ್ಲಿ ಅಕ್ಕಿಗಾಗಿ ಕೇಂದ್ರ ಸರಕಾರದ ವಿರುದ್ದ ಪ್ರತಿಭಟನೆ ನಡೆಸಿದರು.
ಇನ್ನೂ ಅದರಂತೆ ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು ಆರು ತಾಲೂಕು ಕೇಂದ್ರಗಳಿAದ ಆಗಮಿಸಿದ ಕಾಂಗ್ರೇಸ್ ಮುಖಂಡರು ಹಾಗೂ ಶಾಸಕರುಗಳು ನಗರದ ಕಾಂಗ್ರೇಸ್ ಕಛೇರಿಯಿಂದ ಓನಕೆ ಓಬವ್ವ ವೃತ್ತದಲ್ಲಿ ನಡೆಸಿದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಆದೇಶದ ಮೇರೆಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಅನ್ನಭಾಗ್ಯ ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಇಂದು ಚಿತ್ರದುರ್ಗ ನಗರದಲ್ಲಿ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ನೇತೃತ್ವದಲ್ಲಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯವರು ಕೇಂದ್ರ ಸರ್ಕಾರದ ವಿರುದ್ಧ ಓನಕೆ ಓಬವ್ವ ವೃತ್ತದಲ್ಲಿ ನಡೆಸಿದ ಬೃಹತ್ ಪ್ರತಿಭಟನೆಯಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ಶಾಸಕ ಟಿ.ರಘುಮೂರ್ತಿ, ಕೆಸಿ ವೀರೇಂದ್ರ (ಪಪ್ಪಿ), ಬಿಜಿ.ಗೋವಿಂದಪ್ಪರವರು, ಎನ್ ವೈ ಗೋಪಾಲಕೃಷ್ಣರವರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಬಿ.ಎನ್.ಚಂದ್ರಪ್ಪ, ಮಾಜಿ ಸಚಿವರಾದ ಹೆಚ್.ಆಂಜನೇಯರವರು, ಜಿಲ್ಲಾ ಅಧ್ಯಕ್ಷರಾದ ತಾಜ್ ಪೀರ್ ರವರು, ಜಿಲ್ಲಾ ಮಹಿಳಾ ಅಧ್ಯಕ್ಷರಾದ ಗೀತಾ ನಂದಿನಿ ಗೌಡ, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಚಳ್ಳಕೆರೆ ತಾಲೂಕ್ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.