ಚಿತ್ರದುರ್ಗ(ಕರ್ನಾಟಕ ವಾರ್ತೆ) ಜೂನ್.21:
ಹಿರಿಯೂರು ತಾಲ್ಲೂಕಿನ ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯಕ್ಕೆ 2024-25ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿಯನ್ನು https://navodaya.gov.in ಮತ್ತು https://cbseitms.rcil.gov.in/nvs ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಇರುವ ಜಿಲ್ಲೆಯ ನಿವಾಸಿಯಾಗಿರಬೇಕು. 2023-24ರ ಶೈಕ್ಷಣಿಕ ಅವಧಿಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು. ಅಭ್ಯರ್ಥಿಯು 01-05-2012 ರಿಂದ 30-07-2014 ರ ನಡುವೆ ಜನಿಸಿರಬೇಕು. 2024ರ ಜನವರಿ 20ರಂದು ಪರೀಕ್ಷೆ ನಡೆಯಲಿದೆ ಎಂದು ಉಡುವಳ್ಳಿಯ ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

Namma Challakere Local News
error: Content is protected !!