ಚಿತ್ರದುರ್ಗ ನಗರದ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಮತ್ತು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ ರವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆ.ಡಿ.ಪಿ. ಸಭೆಯಲ್ಲಿ ಕುಡಿಯುವ ನೀರು, ರೈತರ ಬೆಳೆಗಳಾದ ಅಡಕೆ, ಬಾಳೆ ಈಗೇ ಹಲವು ಮುಖ್ಯವಾಗಿ ಅಂಶಗಳು ಸಭೆಯಲ್ಲಿ ಚರ್ಚೆಯಾದವು
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ದಿವ್ಯಾಪ್ರಭು ಜಿ.ಆರ್.ಜೆ., ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಎಂ.ಎಸ್.ದಿವಾಕರ, ಪ್ರಾದೇಶಿಕ ಆಯುಕ್ತರಾದ ಅಮಾನ್ ಆದಿತ್ಯ ಬಿಸ್ವಾಸ್, ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮೂರ ಕ್ಷೇತ್ರದ ಶಾಸಕ ಎನ್. ವೈ. ಗೋಪಾಲಕೃಷ್ಣ, ಚಿತ್ರದುರ್ಗ ಕ್ಷೇತ್ರದ ವೀರೇಂದ್ರ(ಪಪ್ಪಿ), ಹೊಸದುರ್ಗ ವಿಧಾನ ಸಭಾ ಕ್ಷೇತ್ರದ ಬಿ.ಜಿ. ಗೋವಿಂದಪ್ಪ, ಹೊಳಲ್ಕೆಕೆರೆ ಕ್ಷೆತ್ರದ ಬಿ.ಎನ್. ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಚಿದಾನಂದ, ಹಾಗೂ ತಾಲ್ಲೂಕು ಮಟ್ಟದ ಮತ್ತು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳು ಉಸ್ಥಿತರಿದ್ದರು.