ಚಿತ್ರದುರ್ಗ ಜೂನ್.26: ಚಿತ್ರದುರ್ಗ ಜಿಲ್ಲೆಯಾದ್ಯಂತ ನಾಗರೀಕ ಬಂದೂಕು ತರಬೇತಿ ಶಿಬಿರವನ್ನು ನಡೆಸಲು ಉದ್ದೇಶಿಸಲಾಗಿದ್ದು, ತರಬೇತಿಯನ್ನು ಪಡೆಯಲು ಇಚ್ಚೆ ಇರುವ 18 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳಾ ನಾಗರೀಕರು ಚಿತ್ರದುರ್ಗ ನಗರದ ಮದಕರಿ ಸರ್ಕಲ್ ಮುಂಭಾಗದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಉಪಾಧೀಕ್ಷಕರವರ ಕಚೇರಿಯಲ್ಲಿ ಅರ್ಜಿ ಪಡೆದು ಸಲ್ಲಿಸುವುದು.
ನಾಗರೀಕ ಬಂದೂಕು ತರಬೇತಿ ಶಿಬಿರದ ಈ ಅವಕಾಶವನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 9480803106, 9980939631 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ