ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.28:
2023-24ನೇ ಸಾಲಿಗೆ ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಆನ್ಲೈನ್ ಅರ್ಜಿ ಸಲ್ಲಿಸಲು ಜೂನ್ 30 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಆನ್ಲೈನ್ ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ ಆಗಿರುತ್ತದೆ ಎಂದು ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.