ಚಳ್ಳಕೆರೆ : ಸತತವಾಗಿ 3ನೇ ಭಾರಿಗೆ ಶಾಸಕರಾಗಿ ಆಯ್ಕೆಯಾದ ಮತ್ತು ಕ್ಷೇತ್ರದಲ್ಲಿ ಶಿಕ್ಷಣ ಕ್ರಾಂತಿಯನ್ನು ಮಾಡಿದ ನೂತನ ಶಾಸಕ ಟಿ. ರಘುಮೂರ್ತಿ ರವರಿಗೆ ಕಾಂಗ್ರೆಸ್ ಪಕ್ಷದ ನಗರ ಸಭೆ ಸದಸ್ಯರ ವತಿಯಿಂದ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿರುತ್ತದೆ ಎಂದು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೆ.ವೀರಭದ್ರಯ್ಯ ಹೇಳಿದ್ದಾರೆ.
ಅವರು ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಜುಲೈ 9 ರಂದು ಭಾನುವಾರು ನಗರದ ಶಾಸಕರ ಭವನದಲ್ಲಿ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ ಎಂದರು
ಇನ್ನೂ ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಜಿಲ್ಲಾಮಟ್ಟದ ಪದಾಧಿಕಾರಿಗಳು, ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಹಾಗೂ ಮಾಜಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರ, ಸದಸ್ಯರುಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಮತ್ತು ಕಾಂಗ್ರೆಸ್ ಪಕ್ಷದ ಎಲ್ಲಾ ಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಪ್ರಕಟಣೆಯಲ್ಲಿ ಕೋರಿದೆ.