ಚಳ್ಳಕೆರೆ : ರಾಹುಲ್ ಗಾಂಧಿರವರನ್ನು ಲೋಕಸಭೆ ಸದಸ್ಯರ ಸ್ಥಾನದಿಂದ ಅನರ್ಹ ಗೊಳಿಸುವುದಾಗಿ ಹೇಳಿರುವ ಕೇಂದ್ರ ಬಿ.ಜೆ.ಪಿ. ಸರ್ಕಾರದ ಧೋರಣೆಯನ್ನು ಖಂಡಿಸಿ ಶಾಸಕರಾದ ಟಿ.ರಘುಮೂರ್ತಿರವರ ಅಧ್ಯಕ್ಷತೆಯಲ್ಲಿ ಮೌನ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿರುತ್ತದೆ.
ಚಳ್ಳಕೆರೆ ತಾಲ್ಲೂಕು ಕಛೇರಿ ಮುಂಭಾಗದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗ ಕೆ.ಪಿ.ಸಿ.ಸಿ.ಅಧ್ಯಕ್ಷರ ಆದೇಶದ ಮೇರೆಗೆ ಜುಲೈ 12 ರಂದು ಮಾಜಿ ಎ.ಐ.ಸಿ.ಸಿ. ಅಧ್ಯಕ್ಷರು ಹಾಗೂ ಸಂಸದರಾದ ರಾಹುಲ್ ಗಾಂಧಿ ರವರ ಪರವಾಗಿ ಕಾಂಗ್ರೆಸ್ ಪಕ್ಷದ ಜಿಲ್ಲಾಮಟ್ಟದ ಪದಾಧಿಕಾರಿಗಳು, ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಹಾಗೂ ಮಾಜಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರ, ಸದಸ್ಯರುಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಮತ್ತು ಕಾಂಗ್ರೆಸ್ ಪಕ್ಷದ ಎಲ್ಲಾ ಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಚಳ್ಳಕೆರೆ ಮತ್ತು ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಕಟಣೆಯಲ್ಲಿ ಕೋರಿದೆ.

About The Author

Namma Challakere Local News
error: Content is protected !!