ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ19:
ಚಿತ್ರದುರ್ಗ ಜಿಲ್ಲೆಯಲ್ಲಿ 2023-24ನೇ ಸಾಲಿನ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯನ್ನು ಜಾರಿಗೊಳಿಸಿ, ಅಧಿಸೂಚಿಸಲಾಗಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.
ನಿರ್ಧರಿತ ಬೆಳೆಗಳು ಮತ್ತು ವಿಮಾ ಮೊತ್ತ ಹಾಗೂ ರೈತರ ಕಂತು ವಿವರ: ಮುಸುಕಿನ ಜೋಳ (ನೀರಾವರಿ) ವಿಮಾ ಮೊತ್ತ ರೂ.64500, ರೈತರ ಕಂತು ರೂ.1291, ಮುಸುಕಿನ ಜೋಳ (ಮಳೆಯಾಶ್ರಿತ) ವಿಮಾ ಮೊತ್ತ ರೂ.56500, ರೈತರ ಕಂತು ರೂ.1131, ತೊಗರಿ (ಮಳೆಯಾಶ್ರಿತ) ವಿಮಾಮೊತ್ತ ರೂ.4800, ರೈತರ ಕಂತು ರೂ.961, ಸೂರ್ಯಕಾಂತಿ (ಮಳೆಯಾಶ್ರಿತ) ವಿಮಾ ಮೊತ್ತ ರೂ.40750, ರೈತರ ಕಂತು ರೂ.816, ಸೂರ್ಯಕಾಂತಿ (ನೀರಾವರಿ) ವಿಮಾ ಮೊತ್ತ ರೂ.48800, ರೈತರ ಕಂತು ರೂ.976, ಶೇಂಗಾ (ನೀರಾವರಿ) ವಿಮಾ ಮೊತ್ತ ರೂ.65750, ರೈತರ ಕಂತು ರೂ.3950, ಶೇಂಗಾ (ಮಳೆಯಾಶ್ರಿತ) ವಿಮಾ ಮೊತ್ತ ರೂ.54500, ರೈತರ ಕಂತು ರೂ.1091, ಟೊಮ್ಯಾಟೋ ವಿಮಾ ಮೊತ್ತ ರೂ.141500, ರೈತರ ಕಂತು ರೂ.7084, ಜೋಳ (ಮಳೆಯಾಶ್ರಿತ) ವಿಮಾ ಮೊತ್ತ ರೂ.38250, ರೈತರ ಕಂತು ರೂ.3064, ಜೋಳ(ನೀರಾವರಿ) ವಿಮಾ ಮೊತ್ತ ರೂ.45250, ರೈತರ ಕಂತು ರೂ.906, ಎಳ್ಳು(ಮಳೆಯಾಶ್ರಿತ) ವಿಮಾ ಮೊತ್ತ ರೂ.28750, ರೈತರ ಕಂತು ರೂ.575, ಸಜ್ಜೆ (ಮಳೆಯಾಶ್ರಿತ) ವಿಮಾ ಮೊತ್ತ ರೂ.28250, ರೈತರ ಕಂತು ರೂ.560, ಹುರುಳಿ(ಮಳೆಯಾಶ್ರಿತ) ವಿಮಾ ಮೊತ್ತ ರೂ.20500, ರೈತರ ಕಂತು ರೂ.410, ಹತ್ತಿ(ಮಳೆಯಾಶ್ರಿತ) ವಿಮಾ ಮೊತ್ತ ರೂ.49750, ರೈತರ ಕಂತು ರೂ.2490, ಹತ್ತಿ (ನೀರಾವರಿ) ವಿಮಾ ಮೊತ್ತ ರೂ.73750, ರೈತರ ಕಂತು ರೂ.3692, ಈರುಳ್ಳಿ (ಮಳೆಯಾಶ್ರಿತ) ವಿಮಾ ಮೊತ್ತ ರೂ.75750, ರೈತರ ಕಂತು ರೂ.3792, ಸಾವೆ (ಮಳೆಯಾಶ್ರಿತ) ವಿಮಾ ಮೊತ್ತ ರೂ.28250, ರೈತರ ಕಂತು ರೂ.565, ಕೆಂಪು ಮೆಣಸು (ಮಳೆಯಾಶ್ರಿತ) ವಿಮಾ ಮೊತ್ತ ರೂ.78750, ರೈತರ ಕಂತು ರೂ.3942 ಈ ಬೆಳೆಗಳಿಗೆ ನೋಂದಾಯಿಸಿಕೊಳ್ಳಲು ಜುಲೈ 31 ಕೊನೆಯ ದಿನವಾಗಿದೆ.
ಭತ್ತ (ನೀರಾವರಿ) ವಿಮಾ ಮೊತ್ತ ರೂ. 93250, ರೈತರ ಕಂತು ರೂ. 1867, ನವಣೆ (ಮಳೆಯಾಶ್ರಿತ) ವಿಮಾ ಮೊತ್ತ ರೂ.28250, ರೈತರ ಕಂತು ರೂ.565, ರಾಗಿ (ನೀರಾವರಿ) ವಿಮಾ ಮೊತ್ತ ರೂ.38000, ರೈತರ ಕಂತು ರೂ.1016, ರಾಗಿ (ಮಳೆಯಾಶ್ರಿತ) ವಿಮಾ ಮೊತ್ತ ರೂ.27000, ರೈತರ ಕಂತು ರೂ.851 ಈ ಬೆಳೆಗಳಿಗೆ ನೋಂದಾಯಿಸಿಕೊಳ್ಳಲು ಆಗಸ್ಟ್ 16 ಕೊನೆಯ ದಿನವಾಗಿದೆ.
ತಮ್ಮ ಹೋಬಳಿ ಮಟ್ಟದ ಬೆಳೆಯ ವಿವರವನ್ನು ಸಂಬಂಧಪಟ್ಟ ಕೃಷಿ ಅಧಿಕಾರಿಗಳು, ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು.
ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿಯಲ್ಲಿ ಒಳಪಡಿಸಲಾಗುವುದು. ತದನಂತರ ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಚೆ ಪಡದೇ ಇದ್ದಲ್ಲಿ, ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು.
ಆರ್ಥಿಕ ಸಂಸ್ಥೆಗಳು, ಬ್ಯಾಂಕ್, ಸಾರ್ವಜನಿಕ ಸೇವಾ ಕೇಂದ್ರ (Common service centers)ಗಳಲ್ಲಿ ರೈತರನ್ನು ಬೆಳೆ ವಿಮೆಗೆ ನೋಂದಾಯಿಸಿದಾಗ ಬೆಳೆ ವಿಮೆ ಪ್ರಸ್ತಾವನೆಯನ್ನು ಹಾಗೂ ವಿಮಾ ಕಂತನ್ನು ನಿಗದಿತ ಸಮಯದೊಳಗೆ ನಿಯಮಾನುಸಾರ ಅನುಷ್ಠಾನ ವಿಮಾ ಸಂಸ್ಥೆಗಳಿಗೆ ವರ್ಗಾಯಿಸಲು ಕ್ರಮಕೈಗೊಳ್ಳತಕ್ಕದ್ದು. ನೋಂದಣಿ ಪ್ರಕ್ರಿಯೆಯ ಹಂತದಲ್ಲಿ ಮೇಲೆ ತಿಳಿಸಿದ ಸಂಸ್ಥೆಗಳ ನಿರ್ಲಕ್ಷದಿಂದ ಯಾವುದೇ ಲೋಪ ದೋಷಗಳು ಉಂಟಾದಲ್ಲಿ ಅದ್ದರಿಂದಾಗುವ ಬೆಳೆ ವಿಮೆ ಪರಿಹಾರ ವ್ಯಾಜ್ಯಗಳಿಗೆ ಸಂಬಂಧಿಸಿದ ಸಂಸ್ಥೆಗಳೆ ನೇರ ಹೊಣೆಗಾರರಾಗಿರುತ್ತಾರೆ.
ಆಸಕ್ತ ರೈತರು ತಮ್ಮ ವ್ಯಾಪ್ತಿಯ ಬ್ಯಾಂಕುಗಳಲ್ಲಿ ಹಾಗೂ ಅನುಮೋದಿತ ಸಾರ್ವಜನಿಕ ಸೇವಾ ಕೇಂದ್ರಗಳಲ್ಲೂ ವಿಮೆಗೆ ನೋಂದಣಿ ಮಾಡಬಹುದಾಗಿದೆ. ಚಿತ್ರದುರ್ಗ ಜಿಲ್ಲೆಗೆ agriculture insurance company of india limitedಅನುಷ್ಠಾನ ಸಂಸ್ಥೆಯಾಗಿರುತ್ತದೆ. ರೈತರು ನೋಂದಾಣಿಗಾಗಿ ಕಡ್ಡಾಯವಾಗಿ FRUITS ID (FID) ಹೊಂದಿರಬೇಕು. ಆಸಕ್ತ ರೈತ ಬಾಂದವರು ನಿಗಧಿತ ದಿನಾಂಕದೊಳಗೆ ಬೆಳೆ ವಿಮೆಗೆ ನೋಂದಾವಣೆ ಮಾಡಲು ವಿನಂತಿಸಿದೆ.