ಗ್ರಾಮ ಪಂಚಾಯಿತ್”ಬಾಪುಜೀ ಸೇವಾ ಕೇಂದ್ರ”ದಲ್ಲಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಅನುವು..!
ತಳಕು ಗ್ರಾಮ ಪಂಚಾಯತಿ ಕಛೇರಿಯಲ್ಲಿ ಪಿಡಿಓ ಶಶಿರಾಜ್ ವಿತರಣೆ

ಚಳ್ಳಕೆರೆ : ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಒಂದೊAದಾಗಿ ಜಾರಿಗೊಳಿಸುತ್ತಿರುವ ರಾಜ್ಯ ಸರಕಾರ ಮೊದಲ ಅಂತವಾಗಿ ಮಹಿಳಾ ಶಕ್ತಿ ಯೋಜನೆ ನಂತರ ಗೃಹ ಜ್ಯೋತಿ, ಅನ್ನಭಾಗ್ಯ ಯೋಜನೆ, ನಂತರ ಗೃಹ ಲಕ್ಷ್ಮಿ ಯೋಜನೆ ಜಾರಿಗೊಳಿಸಿದ ರಾಜ್ಯ ಸರಕಾರ, ಈ ಮಹತ್ವದ ಯೋಜನೆಗಳನ್ನು ಸಾರ್ವಜನಿರಿಗೆ ತಲುಪಿಸಲು ಅಧಿಕಾರಿಗಳು ಜನರಿಗೆ ಸ್ಪಂದಿಸುವ ಮೂಲಕ ಸಾರ್ವಜನಿಕರ ಸೇವೆಗೆ ಮುಂದಾಗಬೇಕಿದೆ.
ಅದರAತೆ ಇಂದು ಚಳ್ಳಕೆರೆ ತಾಲೂಕಿನ ತಳಕು ಗ್ರಾಮ ಪಂಚಾಯತಿ ಕಛೇರಿಯಲ್ಲಿ ಪಿಡಿಓ ಶಶಿರಾಜ್ ರವರು ಗ್ರಾಮ ಪಂಚಾಯಿತ್ ನಲ್ಲಿ ಬಾಪುಜೀ ಸೇವಾ ಕೇಂದ್ರದಲ್ಲಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಅರ್ಜಿಯನ್ನು ಹಾಕುವ ಮೂಲಕ ಜನ ಸ್ನೇಹಿ ಗ್ರಾಮ ಪಂಚಾಯತ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅದರಂತೆ ಪಿಡಿಓ ಶಶಿರಾಜ್ ಮಾಧ್ಯಮದೊಂದಿಗೆ ಮಾತನಾಡಿ, ಗ್ರಾಮ ಪಂಚಾಯತ್ ನಲ್ಲಿ ಬಾಪೂಜಿ ಸೇವಾ ಕೇಂದ್ರದ ಮೂಲಕ ಗ್ರಾಮದಲ್ಲಿ ಇರುವ ಸಾರ್ವಜನಿಕರ ಸೇವೆಗೆ ಮುಕ್ತವಾಗಿದೆ ಸರಕಾರದಿಂದ ಬಿಡುಗಡೆಯಾಗುವ ಯೋಜನೆಗಳನ್ನು ಕಾಲ ಕಾಲಕ್ಕೆ ತಕ್ಕಂತೆ ಸಾರ್ವಜನಿಕರಿಗೆ ತಲುಪಿಸಲು ಸಹಕಾರಿಯಾಗಿದೆ, ಜನ ಸ್ನೇಹಿ ಗ್ರಾಮ ಪಂಚಾಯತ್ ನ್ನಾಗಿ ಮಾಡಲಾಗಿದೆ ಎಂದಿದ್ದಾರೆ.

About The Author

Namma Challakere Local News
error: Content is protected !!