ಚಳ್ಳಕೆರೆ : ಡೆಂಗ್ಯೂ ಒಂದು ಸಾಂಕ್ರಾಮಿಕ ರೋಗವಾಗಿದ್ದು ಒಬ್ಬರಿಂದ ಒಬ್ಬರಿಗೆ ಸೋಂಕಿತ ಈಜಿಪ್ಟ್ ಎಂಬ ಸೊಳ್ಳೆಗಳು ಆರೋಗ್ಯವಂತ ವ್ಯಕ್ತಿಯನ್ನು ಕಚ್ಚಿದಾಗ ಬರುವುದು ನಿಂತ ನೀರು ಸೊಳ್ಳೆಗಳ ತಾಣ, ಮನೆಯ ಹತ್ತಿರ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿಗಳಾದ ಕುದಾಪುರ ತಿಪ್ಪೆಸ್ವಾಮಿ ಹೇಳಿದರು.
ಅವರು ನಗರದಲ್ಲಿ ಡೆಂಗ್ಯೂ ವಿರೋಧಿ ಮಾಸಾಚರಣೆ ಅಂಗವಾಗಿ ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಾಗೃತಿ ಜಾಥ ಕಾರ್ಯಕ್ರಮದಲ್ಲಿ ಮಾತನಾಡಿದರು, ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸುವ ಮೂಲಕ ಸಂಪೂರ್ಣವಾಗಿ ಡೆಂಗ್ಯೂವನ್ನು ತಡೆಗಟ್ಟಬೇಕು ಆದ್ದರಿಂದ ನಿಮ್ಮ ಪಾತ್ರ ಬಹಳ ಮುಖ್ಯವಾಗಿದೆ ಎಂದರು.
ಇನ್ನೂ ಈ ಜಾಗೃತಿ ಜಾಥ ಕಾರ್ಯಕ್ರಮದಲ್ಲಿ ನೂರಾರು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ನಗರದ ಪ್ರಮುಖ ವೃತ್ತಗಳಾದ ವಾಲ್ಮೀಕಿ ಸರ್ಕಲ್, ಅಂಬೇಡ್ಕರ್ ಸರ್ಕಲ್, ನೆಹರು ಸರ್ಕಲ್‌ಗಳ ಮೂಲಕ ನಗರದ ಹಲವು ಕಡೆ ಡೆಂಗ್ಯೂ ವಿರೋಧಿ ಮಾಸಾಚರಣೆ ಅಂಗವಾಗಿ ಜಾಗೃತಿ ಜಾಥವನ್ನು ನಡೆಸಿದರು.
ಈ ವೇಳೆ ನೂರಾರು ಆಶಾಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಭಾಗಿಯಾಗಿದ್ದರು.

About The Author

Namma Challakere Local News
error: Content is protected !!