ಚಿತ್ರದುರ್ಗ, ಆ.1 – ನಗರದ ಎಸ್.ಜೆ.ಎಂ. ಮಹಿಳಾ ಕಾಲೇಜಿನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿಯಾದ ಪ್ರೊ. ಸಿ. ಬಸವರಾಜಪ್ಪ ಅವರಿಗೆ ಕಾಲೇಜಿನ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಎಲ್. ಈಶ್ವರಪ್ಪ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳ ಭಾಗವಹಿಸಿದ್ದರು.