ಚಿತ್ರದುರ್ಗ(ಕರ್ನಾಟಕ ವಾರ್ತೆ)ಆಗಸ್ಟ್.2:
2023ನೇ ಸಾಲಿನಲ್ಲಿ ಸಾಧಾರಣ ಪ್ರತಿಭೆಯುಳ್ಳ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಮಗುವು ತನ್ನಲ್ಲಿನ ಸಮಯ ಪ್ರಜ್ಞೆಯನ್ನು ಉಪಯೋಗಿಸಿ ಜೀವದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ ಸಾಹಸ ತೋರಿಸಿದ ಪ್ರಕರಣಗಳು ಇತರೆ ಮಕ್ಕಳಿಗೆ ಮಾದರಿಯಾಗುವುದನ್ನು ಉತ್ತೇಜಿಸುವ ಸಲುವಾಗಿ ಶೌರ್ಯ ಪ್ರಶಸ್ತಿ ಹಾಗೂ ಕಲೆ, ಸಾಂಸ್ಕøತಿಕ, ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ, ರಾಷ್ಟ್ರೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜ ಸೇವೆ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೋಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವಂತಹ 18 ವರ್ಷದೊಳಗಿನ (ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ) ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಭಾರತ ಸರ್ಕಾರದ ಅಧಿಕೃತ ವೆಬ್‍ಸೈಟ್ National awards portal on https://awards.gov.in / www.wcd.nic.inನಲ್ಲಿ ಅರ್ಜಿದಾರರು ಆಗಸ್ಟ್ 31 ರೊಳಗೆ ಪ್ರಸ್ತಾವನೆಗಳನ್ನು ಭಾರತ ಸರ್ಕಾರಕ್ಕೆ ಸಲ್ಲಿಸುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Namma Challakere Local News
error: Content is protected !!