ಚಳ್ಳಕೆರೆ ತಾಲ್ಲೂಕಿನ ಎರಡನೇ ಅವಧಿಯ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಶುಭಾಶಯಗಳು ಕೋರಿದ ಚಳ್ಳಕೆರೆ ತಾಲೂಕು ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ಅಧ್ಯಕ್ಷರಾದ ಬಿ ಸಣ್ಣ ಪಾಲಯ್ಯ ಚೌಳಕೆರೆ
ನಾಯಕನಹಟ್ಟಿ::ಚಳ್ಳಕೆರೆ ತಾಲೂಕಿನ ಗ್ರಾಮ ಪಂಚಾಯತಿಗಳ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸರ್ವ ಸದಸ್ಯರ ಜೊತೆಗೂಡಿ ಎಲ್ಲಾ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವಂತೆ ಚಳ್ಳಕೆರೆ ತಾಲೂಕು ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಅಧ್ಯಕ್ಷ ಬಿ ಸಣ್ಣ ಪಾಲಯ್ಯ ಹೇಳಿದ್ದಾರೆ.
ಅವರು ಶುಕ್ರವಾರ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು ನಮ್ಮ ಚಳ್ಳಕೆರೆ ತಾಲೂಕಿನ ಗ್ರಾಮ ಪಂಚಾಯತಿಗಳ ಎರಡನೇ ಅವಧಿಯ ಚುನಾವಣೆಯಲ್ಲಿ ಜಯಗಳಿಸಿದ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಆಯಾ ಗ್ರಾಮಪಂಚಾಯಿತಿಗಳ ಸದಸ್ಯರ ಜೊತೆಗೂಡಿ ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಮತ್ತು ಚಳ್ಳಕೆರೆ ತಾಲೂಕಿನ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟಕ್ಕೆ ಬೆಂಬಲಿಸುವಂತೆ ಮತ್ತು ಪಂಚಾಯತ್ ರಾಜ್ ಆಕ್ಟ್ ನ್ನು ಗಟ್ಟಿಗೊಳಿಸೋಣ ಎಂದು ಈ ಸಂದರ್ಭದಲ್ಲಿ ಮನವಿ ಮಾಡಿದರು