ಚಳ್ಳಕೆರೆ: ತಾಲೂಕಿನಾಧ್ಯಂತ ನಡೆದ ಗ್ರಾಮ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ ಉಪಾಧ್ಯಕ್ಷರನ್ನು ಸ್ಥಳೀಯ ಶಾಸಕ ಟಿ.ರಘುಮೂರ್ತಿ ನಗರದ ಶಾಸಕರ ಭವನದಲ್ಲಿ ಅಭಿನಂದನೆ ಸಲ್ಲಿಸಿ ಶುಭಾ ಕೋರಿದರು.
ತಾಲೂಕಿನ ಬೆಳಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಲಲಿತಾಮ್ಮ ತಿಪ್ಪೇಸ್ವಾಮಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ರೂಪ ಕೃಷ್ಣ ಮೂರ್ತಿ, ನನ್ನಿವಾಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಶಿವಮ್ಮ ರಾಜಣ್ಣ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಿಬಿಜಾನ್ ಶೇಕ್ ದಾದಾಪೀರ್ ರವರನ್ನು ಸನ್ಮಾನಿಸಿದರು.
ಇನ್ನೂ ಪಗಡಲಬಂಡೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಡಿ.ಕೆ.ಕಲ್ಲೇಶಪ್ಪ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ತಿಪ್ಪಮ್ಮ ಸಣ್ಣಿರನಾಯಕ ರವರನ್ನು ಸನ್ಮಾನಿಸಿದರು.
ಪಿ.ಮಹದೇವಪುರ ಗ್ರಾಮ ಪಂಚಾಯಿತಿ 2ನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಕವಿತಾ ರಾಜೇಶ್ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ಓಬಳೇಶಪ್ಪ ರವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ,ಶಶಿಧರ ಸದಸ್ಯರುಗಳು ಹಾಗೂ ಮುಖಂಡರಾದ ಜನಾರ್ದನ,ಬಸವರಾಜ್ ಹಾಗೂ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು