ಚಿತ್ರದುರ್ಗ ಜಿಲ್ಲೆಯ ಕವಾಡಿಗಟರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಐದು ಜನ ಸಾವನಪ್ಪಿದ್ದು, ನೂರಾರು ಜನರು ಅಸ್ವಸ್ಥರಾದ ಘಟನೆ ಮಾಸುವ ಮುನ್ನವೇ ತುರುವನೂರು ಹೋಬಳಿಯ ಮುದ್ದಾಪುರ ಹೊಸಹಟ್ಟಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ.
ಇನ್ನೂ ಕ್ಷೇತ್ರದ ಶಾಸಕ ಇ.ರಘುಮೂರ್ತಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಾದ ರೋಗಿಗಳ ಆರೋಗ್ಯ ವಿಚಾರಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿ
ನಿಮ್ಮ ಜೊತೆಯಲ್ಲಿ ನಾನು ಇದ್ದೆನೆ ಯಾರು ಕೂಡ ದೃತಿಗೆಡುವುದು ಬೇಡ ನಿಮ್ಮ ಆರೋಗ್ಯ ರಕ್ಷಣೆಗೆ ಈಗಾಗಲೇ ಆರೋಗ್ಯ ಅಧಿಕಾರಿಗಳ ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದೆನೆ ಎಂದು ಅಸ್ವಸ್ಥತ್ತಗೊಂಡವರಿಗೆ ದೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಉಪ ವಿಭಾಗ ಅಧಿಕಾರಿಗಳು ಕಾರ್ತಿಕ್, ತಹಶೀಲ್ದಾರ್ ನಾಗವೇಣಿ, ಜಿಲ್ಲಾ ಆರೋಗ್ಯ ಅಧಿಕಾರಿಗಳಾದ ರಂಗನಾಥ, ಜಿಲ್ಲಾ ಶಸ್ತ್ರಚಿಕಿತ್ಸೆಕರಾದ ದೇವರಾಜ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬುರೆಡ್ಡಿ, ಮುಖಂಡರಾದ ಮತ್ತು ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.