ಚಳ್ಳಕೆರೆ : ರಾಜ್ಯ ಸರಕಾರ ಬಡ ಮಕ್ಕಳ ಅಪೌಷ್ಠಿಕತೆಯನ್ನು ಮನಗಂಡು ಮಕ್ಕಳಿಗೆ ಮೊಟ್ಟೆ ಬಾಳೆಹಣ್ಣು ನೀಡುವುದು ಶ್ಲಾಘನೀಯ ಎಂದು ಸ್ಥಳೀಯ ಶಾಸಕ ಟಿ.ರಘುಮೂರ್ತಿ ಹೇಳಿದರು.
ಅವರು ನಗರದ ಹೆಗ್ಗೆರಿ ತಾಯಮ್ಮ ಬಾಲಕಿಯರ ಪ್ರೌಢಶಾಲೆಯಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯಾಲಯ ಚಳ್ಳಕೆರೆ, ಕ್ಷೇತ್ರ ಶಿಕ್ಷಾಧಿಕಾರಿಗಳ ಕಛೇರಿ ಚಳ್ಳಕೆರೆ ಸಹಭಾಗಿತ್ವದಲ್ಲಿ ಪ್ರಧಾನಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಮಧ್ಯಾಹ್ನ ಉಪಹಾರ ಯೋಜನೆ) ಪೂರಕ ಪೌಷ್ಠಿಕ ಆಹಾರ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ, ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
1ರಿಂದ 10ನೇ ತರಗತಿ ಮಕ್ಕಳಿಗೆ ಮೊಟ್ಟೆ ಬಾಳೆಹಣ್ಣು ಹಾಗೂ ಶೇಂಗಾ ಚುಕ್ಕಿಯ ಕಾರ್ಯಕ್ರಮವು ಕಾಂಗ್ರೇಸ್ ಪಕ್ಷದ ಆಡಳಿತದ ರಾಜ್ಯ ಸರಕಾರ ಬಡ ಜನರ ಬಾಳಿಗೆ ಬೆಳಕಾಗುವ ನಿಟ್ಟಿನಲ್ಲಿ ಶಿಕ್ಷಣಿಕೆ ಕ್ಷೇತ್ರದಲ್ಲಿ ರಾಜ್ಯ ಸರಕಾರ ತನ್ನದೇ ಆದ ಚಾಪು ಮೂಡಿಸುವ ಮೂಲಕ ಮಕ್ಕಳಿಗೆ ವಾರದಲ್ಲಿ ಎರಡು ದಿನ ಬಾಳೆ ಹಣ್ಣು, ಮೊಟ್ಟೆ, ಶೆಂಗಾ ಚುಕ್ಕಿ ನೀಡುವ ಮಹತ್ವ ಕಾರ್ಯಕ್ರಮ ಇದಾಗಿದೆ ಎಂದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್, ಅಕ್ಷರ ದಾಸೋಹ ಅಧಿಕಾರಿಗಳಾದ ತಿಪ್ಪೇಸ್ವಾಮಿ, ರಾಜ್ಕುಮಾರ್, ಶಾಲೆಯ ಮುಖ್ಯ ಶಿಕ್ಷಕರು, ಮುಖಂಡರು, ಕಾರ್ಯಕರ್ತರು ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಶಾಲಾ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.