ಮಲ್ಲೂರಹಳ್ಳಿಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಎಸ್ ಡಿ ಎಂ ಸಿ ಅಧ್ಯಕ್ಷ ವೆಂಕಟೇಶ್
ಮಲ್ಲೂರ ಹಳ್ಳಿಯಲ್ಲಿ ಸಂಭ್ರಮದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನೂರಾರು ವಿದ್ಯಾರ್ಥಿಗಳು ಪ್ರತಿಭೆ ಪ್ರದರ್ಶನ.
ನಾಯಕನಹಟ್ಟಿ:: ಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣ ಗೊಳಿಸುವುದೇ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಎಸ್ ಡಿ ಎಂ ಸಿ ಅಧ್ಯಕ್ಷ ವೆಂಕಟೇಶ್ ಹೇಳಿದ್ದಾರೆ.
ಅವರು ಶುಕ್ರವಾರ ಸಮೀಪದ ಮಲ್ಲೂರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ 2023 -24ನೇ ಸಾಲಿನ ಮಲ್ಲೂರಹಳ್ಳಿ ಕ್ಲಸ್ಟರ್ ವತಿಯಿಂದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರ ಮುಖಾಂತರ ಉದ್ಘಾಟಿಸಿ ಮಾತನಾಡಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಅಡಗಿರುವ ಕಲೆಯನ್ನು ಹೊರತೆಗೆಯಲು ಶಾಲೆಗಳಲ್ಲಿ ಪ್ರತಿಭಾ ಕಾರಂಜಿ ಇದೊಂದು ಉತ್ತಮ ವೇದಿಕೆ ಪ್ರತಿಭಾ ಕಾರಂಜಿ ಎಂಬುವುದು ಕಲಾ ಪ್ರತಿಭೆಗಳ ಚಿನ್ನರ ಹಬ್ಬ ಪೋಷಕರಿಗೆಲ್ಲದೆ ಸಾರ್ವಜನಿಕರು ಖುಷಿ ಪಡುವ ಹಬ್ಬ ಮಕ್ಕಳ ಪ್ರತಿಭೆಯನ್ನು ತಂದೆ ತಾಯಿಗಳು ಹತ್ತಿರದಿಂದ ಕಣ್ತುಂಬಿಕೊಳ್ಳುವ ವೇದಿಕೆಯಾಗಿದೆ
ಎಂದರು.