ಡಿ.ದೇವರಾಜು ಅರಸು ರವರ ಜನ್ಮ ದಿನಾಚರಣೆ ಅಂಗವಾಗಿ ಚಳ್ಳಕೆರೆ ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅರಸು ಭವನದಲ್ಲಿ ನಡೆದ ಡಿ.ದೇವರಾಜು ಅರಸು ರವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಟಿ.ರಘುಮೂರ್ತಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ರೆಹಾನ್ ಪಾಷಾ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ದಿವಾಕರ, ಡಿ.ವೈ.ಎಸ್.ಪಿ. ಗಳಾದ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್, ಪಶು ವೈದ್ಯಾಧಿಕಾರಿಗಳಾದ ರೇವಣ್ಣ, ನಗರಸಭೆ ಸದಸ್ಯರಾದ ರಮೇಶ್ ಗೌಡ,ರಾಘವೇಂದ್ರ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.