ಸ್ವಚ್ಛತೆಯ ಮೂಲಕ ರೋಗ ನಿಯಂತ್ರಿಸೋಣ ಎಂಬ ಘೋಷಣೆಯನ್ನು ಕೂಗುತ್ತಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು
ನಾಯಕನಹಟ್ಟಿ:: ಪರಿಸರ ಸ್ವಚ್ಛತೆಯ ಮೂಲಕ ಕೀಟಜನ್ಯ ರೋಗಗಳನ್ನು ನಿಯಂತ್ರಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಪ್ರಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶೇಷಾದ್ರಿ ನಾಯಕ್ ಹೇಳಿದ್ದಾರೆ .
ಅವರು ಮಂಗಳವಾರ ಸಮೀಪದ ನಲಗೇತನಹಟ್ಟಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ವಿಶ್ವ ಸೊಳ್ಳೆ ದಿನದ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಎಂದು ಆರೋಗ್ಯ ನಿರೀಕ್ಷಣಾಧಿಕಾರಿ, ಶೇಷಾದ್ರಿ ನಾಯಕ್ ತಿಳಿಸಿದ್ದಾರೆ.
ಇದೇ ವೇಳೆ ಆರೋಗ್ಯ ಕಿರಿಯ ನಿರೀಕ್ಷಣಾಧಿಕಾರಿ ಬಿ ಸತೀಶ್ ಮಾತನಾಡಿ ಸೊಳ್ಳೆಗಳ ಕಡಿತ ತಪ್ಪಿಸಿಕೊಳ್ಳುವ ವಿಧಾನ ಅರಿವು ಮೂಡಿಸುವುದಕ್ಕಾಗಿ ಪ್ರತಿವರ್ಷ ಆಗಸ್ಟ್ 20 ರಂದು ವಿಶ್ವ ಸೊಳ್ಳೆಗಳ ದಿನವನ್ನು ಆಚರಿಸಲಾಗುತ್ತದೆ ಸೊಳ್ಳೆಗಳು ನಿಂತ ನೀರಿನಲ್ಲಿ ಮಾತ್ರ ಮೊಟ್ಟೆ ಇಡುತ್ತವೆ ಗ್ರಾಮೀಣ ಪ್ರದೇಶದಲ್ಲಿ ತಮ್ಮ ಮನೆಯ ಪರಿಕರಗಳಲ್ಲಿ ತುಂಬಿಕೊಳ್ಳುವ ನೀರಿನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ತಿಳಿಸಿದೆ. ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಪರಿಸರ ಸ್ವಚ್ಛತೆಯ ಮೂಲಕ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಇದೇ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶೇಷಾದ್ರಿ ನಾಯಕ್, ಎಲ್ ಹೆಚ್ ವಿ ಸುಕನ್ಯಾ, ಆರೋಗ್ಯ ನಿರೀಕ್ಷಣಾಧಿಕಾರಿ ಚೈತ್ರ ,ರಮೇಶ್, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಏಕಾಂತಮ್ಮ ಅರ್ಪಿತ ಕೆಂಚಮ್ಮ, ಸಂಪಿಗೆ, ಸಮುದಾಯ ಆರೋಗ್ಯ ಅಧಿಕಾರಿ ಕಾವ್ಯ, ಸುಶ್ಮಿತಾ, ಹೊನ್ನೂರ್ ಸ್ವಾಮಿ, ಸೇರಿದಂತೆ ನಲಗೇತನಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಎಲ್ಲಾ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು