ಪತ್ರಕರ್ತರ ಸಮಸ್ಯೆಗಳ ಬಗ್ಗೆ ಗಂಭೀರವಾಗಿ ಚರ್ಚೆ ಮಾಡುವಂತಹ ಸಮಸ್ಯೆಗಳಿಗೆ ಕೆಲವೇ ಕೆಲವು ಪತ್ರಕರ್ತರನ್ನು ಆಹ್ವಾನಿಸಿ ಇನ್ನೂ ಕೆಲವು ಸಂಘಟನೆಗಳ ಪತ್ರಕರ್ತರನ್ನು ಹೊರಗಿಟ್ಟು ಸಭೆ ಮಾಡುವುದು ಸರಿಯಲ್ಲ ಎಂದು ವಿರೋಧಿಸಿ ಕರ್ನಾಟಕ ಮಾಧ್ಯಮ ಮಹಾ ಒಕ್ಕೂಟದಿಂದ ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಪತ್ರಕರ್ತರ ಸಮಸ್ಯೆಗಳ ಬಗ್ಗೆ ಹಾಲಿಸದೆ ಕೆಲವೇ ಪತ್ರಕರ್ತರನ್ನು ಕೃಷ್ಣ ಗೃಹ ಕಚೇರಿಯಲ್ಲಿ ಆಹ್ವಾನಿಸಿರುವುದು ಖಂಡಿನೀಯ ಎಂದು ಹಲವು ಪತ್ರಕರ್ತರು ಪ್ರತಿಭಟನೆ ನಡೆಸಿದರು.
ಈ ಸಭೆಯಲ್ಲಿ ಗ್ರಾಮೀಣ ಪತ್ರಕರ್ತರು ಹಾಗೂ ವಿತರಕರ ಸಮಸ್ಯೆಯನ್ನು ಆಲಿಸುವ ಮೂಲಕ ಅವರ ಮೂಲಭೂತ ಸೌಲಭ್ಯಗಳ ಬಗ್ಗೆ ಸರಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮಕೈಗೊಳ್ಳಬೇಕಿದೆ ಎಂದರು.
ಈ ಪ್ರತಿಭಟನೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಡಿ.ಈಶ್ವರಪ್ಪ, ದಾವಣಗೆರೆ ಜಿಲ್ಲಾ ಅಧ್ಯಕ್ಷ ಮಾಂತೇಶ್‌ರಾವ್, ಸರ್ವೆ ದ್ವಾರಕೀಶ್, ಚಿತ್ರದುರ್ಗ ಜಿಲ್ಲಾ ಅಧ್ಯಕ್ಷ ಕೆ.ಜೆ.ಅನಂತಮೂರ್ತಿ ನಾಯಕ್, ಪತ್ರಕರ್ತ ರ‍್ರಿಸ್ವಾಮಿ ಉಪಸ್ಥಿತರಿದ್ದರು

About The Author

Namma Challakere Local News
error: Content is protected !!