ತುಂಗಭದ್ರಾ ಅಣೆಕಟ್ಟಿನಿಂದ ಕುಡಿಯುವ ನೀರು ಸರಬರಾಜು ಕುರಿತು : ನಾಳೆ ಕೇಂದ್ರ ಸಚಿವರ ಪ್ರವಾಸ
ಚಿತ್ರದುರ್ಗ : ತುಂಗಭದ್ರಾ ಅಣೆಕಟ್ಟಿನಿಂದ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿಯ ಪ್ರಗತಿ ವೀಕ್ಷಣೆ ಮಾಡಲು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಅವರು ಇದೇ ಆಗಸ್ಟ್ 24ರಂದು ಚಳ್ಳಕೆರೆ, ಮೊಳಕಾಲ್ಮೂರು, ಪಾವಗಡ ವಿಧಾನಸಭಾ ಕ್ಷೇತ್ರಕ್ಕೆ ಪ್ರವಾಸ ಮಾಡಲಿದ್ದಾರೆ.
ಬೆಳಿಗ್ಗೆ 10:30 ರಿಂದ ಕುರುಡಿಹಳ್ಳಿ ಗ್ರಾಮಮದಿಂದ ವೀಕ್ಷಣೆ ಆರಂಭಿಸುವ ಸಚಿವರು ಕಾಮಗಾರಿ ಪ್ರಗತಿಯಲ್ಲಿರುವ ಸ್ಥಳಗಳಿಗೆ ಭೇಟಿ ನೀಡುವರು. ನಂತರ ಹೊಸಪೇಟೆಯಲ್ಲಿ ಸಭೆ ನಡೆಸುವರು ಎಂದು ಸಚಿವರ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.