ಚಳ್ಳಕೆರೆ: ಕಾಂಗ್ರೆಸ್ ಸರಕಾರ ನೀಡಿರುವ 5 ಗ್ಯಾರಂಟಿಗಳ ಭರವಸೆಗಳನ್ನು ಈಡೇರಿಸಲು ಮುಂದಾಗಿದ್ದು ಈಗಾಗಲೇ ಗೃಹಜ್ಯೋತಿ ಅನ್ನಭಾಗ್ಯ ಶಕ್ತಿ ಯೋಜನೆಗಳನ್ನು ಜಾರಿಗೆ ತಂದಿದ್ದು ನಾಲ್ಕನೇ ಯೋಜನೆಯಾಗಿ ಗೃಹಲಕ್ಷ್ಮಿ ಯೋಜನೆಯನ್ನು ಇದೆ ತಿಂಗಳ 30 ರಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ಶಾಸಕ ಟಿ ರಘುಮೂರ್ತಿ ಹೇಳಿದರು.
ಅವರು ನಗರಸಭೆ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿರುವ ಪ್ರಣಾಳಿಕೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ಬಡವರಿಗಾಗಿ ರೂಪಿಸಿದ್ದು ಯಾವುದೇ ಕಾರಣಕ್ಕೂ ಅರ್ಹ ಮಹಿಳೆಯರು ಇದರಿಂದ ವಂಚಿತರಾಗಬಾರದು ಈ ನಿಟ್ಟಿನಲ್ಲಿ ತಾಲೂಕಿನ ಸಂಬAಧಪಟ್ಟ ಎಲ್ಲಾ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಕೆಲಸ ನಿರ್ವಹಿಸಬೇಕು ಎಂದರು.
ಈ ಯೋಜನೆಯಿಂದ ಮಹಿಳೆಯರು ಪ್ರತಿ ತಿಂಗಳು 2000 ಗಳನ್ನು ಪಡೆಯಲಿದ್ದು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಈ ಯೋಜನೆ ವರದಾನವಾಗಲಿದೆ ಆದ್ದರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಅಂಗನವಾಡಿ ಶಿಕ್ಷಕರು ಹಾಗೂ ಆಶಾ ಕಾರ್ಯಕರ್ತರು ಪ್ರತಿ ಮನೆಗೆ ಭೇಟಿ ನೀಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಯೋಜನೆಗಳನ್ನು ದೊರಕಿಸಿ ಕೊಡುವ ನಿಟ್ಟಿನಲ್ಲಿ ಕಾರ್ಯ್ಯೊನ್ಮುಕರಾಗಬೇಕು ಯಾವುದೇ ಅರ್ಹ ಫಲಾನುಭವಿಗಳು ಇಂತಹ ಯೋಜನೆಗಳಿಂದ ವಂಚಿತರಾಗದAತೆ ನಿಗವಹಿಸಿ ಕೆಲಸ ಮಾಡಬೇಕು.
ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳನ್ನು ಪ್ರತಿ ಎರಡು ಗ್ರಾಮ ಪಂಚಾಯಿತಿಗಳAತೆ ನಿಯೋಜನೆಗೊಳಿಸಿ ದೂರದ ಗ್ರಾಮ ಪಂಚಾಯಿತಿಗಳಿಗೆ ನಿಯೋಜನೆಗೊಳಿಸದೆ ಹತ್ತಿರವಿರುವ ಗ್ರಾಮ ಪಂಚಾಯಿತಿಗಳಿಗೆ ನೇಮಿಸಿದಾಗ ಅವರು ಕಾರ್ಯನಿರ್ವಹಿಸಲು ಸಹಕಾರಿಯಾಗುತ್ತದೆ ತಾಲೂಕು ಪಂಚಾಯತಿ ಇಒಗಳು ಇದರ ಬಗ್ಗೆ ಗಮನಹರಿಸಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರಹಾನ್ ಪಾಷ, ನಗರಸಭೆ ಪೌರಾಯುಕ್ತ ಸಿ ಚಂದ್ರಪ್ಪ, ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು, ನಗರಸಭೆ ಸದಸ್ಯರು ಉಪಸ್ಥಿತರಿದ್ದರು.