ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದ ಚಿತ್ರದುರ್ಗದ ಕವಾಡಿಗರಹಟ್ಟಿಗೆ ಅಬಕಾರಿ ಸಚಿವ ಹೆಚ್.ಸಿ.ಮಹಾದೇವಪ್ಪ ಹಾಗೂ ಸ್ಥಳಿಯ ಶಾಸಕ ಕೆ.ಸಿ.ವೀರೇಂದ್ರ, ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಬೇಟಿ‌ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸರ್ಕಾರದಿಂದ ಪರಿಹಾರದ ಚೆಕ್ ಅನ್ನು ವಿತರಿಸಿದರು.

ಈ ವೇಳೆ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸುಧಾರಿಸಿಕೊಳ್ಳುತ್ತಿರುವವರಿಗೆ ಧೈರ್ಯ ಹೇಳಿ, ಅವರಿಗೆ ಆಹಾರ ಧಾನ್ಯಗಳು ಮತ್ತು ಅಗತ್ಯ ಚಿಕಿತ್ಸೆಯ ವ್ಯವಸ್ಥೆಯನ್ನು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದರಾದ ಬಿ.ಎನ್.ಚಂದ್ರಪ್ಪ, ಹಾಗೂ ಅಧಿಕಾರಿ ವರ್ಗದವರು ಮತ್ತಿರರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!