ಚಳ್ಳಕೆರೆ : ಗ್ರಾಮೀಣ ಭಾಗದ ಮಕ್ಕಳು ಕ್ರೀಡೆಯಿಂದ ದೈಹಿಕವಾಗಿ ಮಾನಸಿಕವಾಗಿ ಸದೃಡರಾಗಲು ಕ್ರೀಡೆ ಅತ್ಯಗತ್ಯ ಈ ಕ್ರೀಡೆಯಿಂದ ಮಾನಸಿಕ ಬುದ್ದಿಮಟ್ಟ ಹೆಚ್ಚುತ್ತದೆ ಅಲ್ಲದೆ ಅವರ ಸೃಜನಶೀಲತೆ ಹಿಮ್ಮಡಿಗೊಳ್ಳುತ್ತದೆ ಎಂದು ಶಾಸಕ ಟಿ.ರಘುಮೂರ್ತಿ ಕಿವಿಮಾತು ಹೇಳಿದರು.
ನಗರದ ಬಿಸಿನೀರು ಮುದ್ದಪ್ಪ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ಸಾರ್ವಜನಿಕಶಿಕ್ಷಣ ಇಲಾಖೆವತಿಯಿಂದ ಆಯೋಜಿಸಿದ್ದ ವಲಯ ಹೋಬಳಿ ಮಟ್ಟದ ಪ್ರೌಢಶಾಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಕ್ರೀಡೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯ, ಕ್ರೀಡೆಗಳಲ್ಲಿ ಯಶಸ್ಸು ಸಾಧಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ತಾಲೂಕಿನ ಕೀರ್ತಿ ಪತಾಕೆಯನ್ನು ಹಾರಿಸಬೇಕು. ಮಕ್ಕಳು ದೇಶದ ಆಸ್ತಿ, ಕ್ರೀಡೆಯಿಂದ ದೇಹ ಸದೃಢ ಹಾಗೂ ಕ್ರೀಯಾಶೀಲತೆ ಹೊಂದುತ್ತದೆ ಪ್ರಯೊಬ್ಬ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸ್ಪರ್ಧಾರ್ಥಿಗಳು ಭಾಗವಹಿಸುವುದು ಮುಖ್ಯವಾಗುತ್ತದೆ ಕ್ರೀಡಾ ಮನೋಭಾವವನ್ನು ಬೆಳೆಸಿಕೊಂಡು ಯಶಸ್ಸು ಸಾಧಿಸುವತ್ತ ಗಮನ ಹರಿಸಬೇಕು ಎಂದು ಕ್ರೀಡಾಪಟು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಇನ್ನೂ ಕ್ಷೇತ್ರ ಶಿಕ್ಷಣಾಧಿಕಾರಿ ಕೆ .ಎಸ್ ಸುರೇಶ್ ಮಾತನಾಡಿ ಮಕ್ಕಳಿಗೆ ಪ್ರತಿವರ್ಷದಂತೆ ಈ ವರ್ಷವೂ ಕೂಡ ಕ್ರೀಡಾಕೂಟ ಆಯೋಜನೆ ಮಾಡಿದೆ, ಅದರಂತೆ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ತಮ್ಮ ಶಾರೀರಿಕ ಹಾಗೂ ಮಾನಸಿಕ ಸದೃಢತೆಯನ್ನು ಸಾಧಿಸಬಹುದು ತರಗತಿಗಳಲ್ಲಿನ ಪಠ್ಯ ಚಟುವಟಿಕೆಗಳಿಗೆ ಒತ್ತನ್ನು ನೀಡಿದಂತೆ ಕ್ರೀಡೆಗಳಿಗೂ ವಿದ್ಯಾರ್ಥಿಗಳು ಆದ್ಯತೆ ನೀಡಬೇಕು, ತೀರ್ಪುಗಾರರ ತೀರ್ಪನ್ನು ಎಲ್ಲರೂ ಗೌರವಿಸಬೇಕು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಲೆಗಳ ದೈಹಿಕ ಶಿಕ್ಷಕರು ನಿಗಾ ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಜೆ ರಾಘವೇಂದ್ರ, ನಗರಸಭೆ ಸದಸ್ಯರಾದ ಕವಿತ, ಅಕ್ಷರ ದಾಸೋಹ ತಿಪ್ಪೇಸ್ವಾಮಿ ಪ್ರಭಾರ ದೈಹಿಕ ಶಿಕ್ಷಕ ವೀರಣ್ಣ, ಕಾಂತರಾಜ್ ಶಿವಲಿಂಗಪ್ಪ, ಬಸವರಾಜ್ ಪ್ರಾಣೇಶ್ ಇತರರಿದ್ದರು.

About The Author

Namma Challakere Local News
error: Content is protected !!