ಕರ್ನಾಟಕ ಸರ್ಕಾರದಿಂದ ರಾಜ್ಯ ಪ್ರಶಸ್ತಿ ಸ್ವೀಕರಿಸಿದ ಶಿಕ್ಷಕ ನಾಗಭೂಷಣ್

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆ ರೇಖಲಗೆರೆ ಲಂಬಾಣಿ ಹಟ್ಟಿ ಚಳ್ಳಕೆರೆ ತಾಲ್ಲೂಕಿನ ಸೃಜನಾತ್ಮಕ ವಿಜ್ಞಾನ ಶಿಕ್ಷಕ ಕೆ.ಟಿ.ನಾಗಭೂಷಣ್ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಶಿಕ್ಷಕರ ದಿನಾಚರಣೆಯಂದು ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಪಾರ ಸೇವೆಯನ್ನು ಪರಿಗಣಿಸಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ಪ್ರಶಸ್ತಿ ಸ್ವೀಕರಿಸಿ ಚಿತ್ರದುರ್ಗ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಈ ಸಂಧರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪ , ಉನ್ನತ ಶಿಕ್ಷಣ ಸಚಿವರಾದ ಶ್ರೀ ಸುಧಾಕರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರಾದ ಬಿ. ಬಿ.ಕಾವೇರಿ, ರಿತೇಶ್ ಕುಮಾರ್ ಸಿಂಗ್, ಪ್ರಾಥಮಿಕ ಮತ್ತು ಪ್ರೌಢಶಾಲಾ ನಿರ್ದೇಶಕರು, ಮತ್ತಿತರ ಗಣ್ಯರು ಹಾಜರಿದ್ದರು.

ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದು ಜಿಲ್ಲೆಗೆ ಕೀರ್ತಿ ತಂದ ಶಿಕ್ಷಕ ನಾಗಭೂಷಣ್ ಇವರನ್ನು ಜಿಲ್ಲೆಯ ಉಪನಿರ್ದೇಶಕರಾದ ಶ್ರೀ ರವಿಶಂಕರ್ ರೆಡ್ಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್ ಕೆ.ಎಸ್, ಶಾಲೆಯ ಮುಖ್ಯ ಶಿಕ್ಷಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಪಿ.ಡಿ.ಒ,ಸದಸ್ಯರು,ಎಸ್. ಡಿ. ಎಂ. ಸಿ ಅಧ್ಯಕ್ಷರಾದ ಜಯಣ್ಣ, ಶಾಲಾ ಸಿಬ್ಬಂದಿ,ಗ್ರಾಮಸ್ಥರು,ಯುವಕರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

About The Author

Namma Challakere Local News
error: Content is protected !!