ನಮ್ಮ ಸಂವಿಧಾನ-ನಮ್ಮ ಹೆಮ್ಮೆ, ಸಂವಿಧಾನದ ಪೀಠಿಕೆ ವಾಚನ ಮಾಡಿದ : ಇಓ.ಹೊನ್ನಯ್ಯ
ಚಳ್ಳಕೆರೆ : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಗರದ ತಾಲೂಕು ಪಂಚಾಯಿತಿ ಕಛೇರಿ ಆವರಣದಲ್ಲಿ ಇಓ.ಹೊನ್ನಯ್ಯ ಅಧ್ಯಕ್ಷತೆಯಲ್ಲಿ ಕಛೇರಿಯ ಎಲ್ಲಾ ಸಿಬ್ಬಂದಿಗಳು ಸಂವಿಧಾನ ಪೀಠಿಕೆ ವಾಚನ ಮಾಡುವ ಕಾರ್ಯಕ್ರಮದಲ್ಲಿ ಬಾಗಿಯಾದರು.
ಇನ್ನೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂವಿಧಾನ ಪೀಠಿಕೆಯನ್ನು ಓದಿ ಕಾರ್ಯಕ್ರಮದಲ್ಲಿ ಮಾತನಾಡಿದ ಇಓ ಹೊನ್ನಯ್ಯ, ನಮ್ಮ ಸಂವಿಧಾನ ನಮ್ಮ ಹೆಮ್ಮೆ. ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನವಿದು, ಅವರ ಆಶಯಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು, ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ನಾವು ನಡೆಯಬೇಕು ಸಂವಿಧಾನ ಇಲ್ಲವಾದರೆ ನಾವು ನೀವು ಇಂದು ಯಾವ ಪರಿಸ್ಥಿತಿಯಲ್ಲಿ ಇರುತ್ತಿದ್ದೆವೋ ಗೊತ್ತಿಲ್ಲ, ಆದ್ದರಿಂದ ಸಂವಿಧಾನವನ್ನು ಪ್ರತಿಯೊಬ್ಬರು ಅರಿತುಕೊಳ್ಳಬೇಕು ಅದರ ಆಶಯ ಮತ್ತು ಕರ್ತವ್ಯಗಳನ್ನು ತಿಳಿದುಕೊಳ್ಳಬೇಕು ಎಂದರು.
ಇದೇ ಸಂಧರ್ಭದಲ್ಲಿ ತಾಪಂ.ಸಹಾಯಕ ನಿದೇರ್ಶಕ ಸಂತೋಶ್ ಕುಮಾರ್, ಸಂಪತ್ ಕುಮಾರ್, ನರೇಗಾ ಇಂಜಿನಿಯಾರ್ , ಪಿಡಿಓಗಳು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.