2023ರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಜೆಜೆ ಹಟ್ಟಿ ಡಾ.ತಿಪ್ಪೇಸ್ವಾಮಿಗೆ ನೀಡಲು ಮಾದಿಗ ಸಮುದಾಯ ಒತ್ತಾಯ

ಚಳ್ಳಕೆರೆ: ಕಳೆದ 15 ವರ್ಷಗಳಿಂದ ಚಿತ್ರದುರ್ಗ ಜಿಲ್ಲೆ ಎಸ್ ಸಿ ಮೀಸಲು ಕ್ಷೇತ್ರವಾಗಿ ಮಾರ್ಪಟ್ಟು ನಮ್ಮ ಸಮುದಾಯದವರೇ ಸಂಸದರಾಗಿ ಆಯ್ಕೆಯಾಗುತ್ತಿದ್ದಾರೆ ಆದರೆ ನಮ್ಮ ಜಿಲ್ಲೆಯ ಸ್ಥಳೀಯರು ಆಯ್ಕೆ ಆಗದಿರುವುದು ನೋವಿನ ಸಂಗತಿಯಾಗಿದೆ ಎಂದು ಮುಖಂಡ ಚೌಳೂರು ಪ್ರಕಾಶ್ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ತಾಲೂಕಿನ ಮಾದಿಗ ದಂಡೋರ ಸಮಿತಿ ಹಾಗೂ ಮಾದಿಗ ಯುವ ಸೇನೆ ಮತ್ತು ಸರ್ವ ಸಮುದಾಯದ ವತಿಯಿಂದ ಜಿಲ್ಲೆಯ ನೂತನ ಶಾಸಕರಿಗೆ ಅ.1ರಂದು ನಡೆಯುವ ನಗರದ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮದ ಪೂರ್ವಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಐದು ಜನ ಶಾಸಕರು ಆಯ್ಕೆಯಾಗಿದ್ದಾರೆ ಇದು ಸಂತಸದ ವಿಷಯ ನಮ್ಮ ಸಮುದಾಯದ ವತಿಯಿಂದ ಅದ್ದೂರಿಯಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಎಲ್ಲಾ ಶಾಸಕರ ಪರವಾಗಿ ಮಾದಿಗ ಸಮುದಾಯ ಚುನಾವಣಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಿದೆ.
ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯವರೇ ಆದ ಜೆಜೆ ಹಟ್ಟಿ ಡಾ. ತಿಪ್ಪೇಸ್ವಾಮಿ ಅವರಿಗೆ ಪಕ್ಷ ಟಿಕೆಟ್ ನೀಡಬೇಕು ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರು ಇವರ ಪರವಾಗಿ ಕಾಂಗ್ರೆಸ್ ಪಕ್ಷದ ಕೇಂದ್ರ ಹಾಗೂ ರಾಜ್ಯ ನಾಯಕರ ಬಳಿ ಟಿಕೆಟ್ ಕೊಡಿಸುವ ಭರವಸೆ ನೀಡಬೇಕು ಎಂದು ಒತ್ತಾಯಿಸಿದರು.
ಚೆನ್ನಮ್ಮನಗತಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಆನಂದ್ ಕುಮಾರ್ ಮಾತನಾಡಿ ಕಳೆದ 20 ವರ್ಷಗಳಿಂದ ಕಾಂಗ್ರೆಸ್‌ನ ನಿಷ್ಠಾವಂತ ಮುಖಂಡರಾಗಿ ಪಕ್ಷದ ಪರವಾಗಿ ಸೇವೆ ಮಾಡುತ್ತಾ ಬಂದಿದ್ದಾರೆ ಇಂತಹ ಸಜ್ಜನ ರಾಜಕಾರಣಿಗೆ ಪಕ್ಷ ಟಿಕೆಟ್ ನೀಡಿದಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ವಶವಾಗುವುದರಲ್ಲಿ ಎರಡು ಮಾತಿಲ್ಲ ವರಿಷ್ಠರು ಸೂಕ್ತ ನಿರ್ಧಾರ ಕೈಗೊಳ್ಳಬೇಕು, ಮಾದಿಗ ಸಮುದಾಯವು ಹಿಂದಿನಿAದಲೂ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಮತ ನೀಡಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಲ್ಲುತ್ತಾ ಬಂದಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡ ಟಿ ಜೆ ವೆಂಕಟೇಶ ಮಾತನಾಡಿ ಕಾಂಗ್ರೆಸ್ ಪಕ್ಷ ದೀನ ದಲಿತರ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ಉತ್ತಮವಾಗಿ ಸ್ಪಂದಿಸುತ್ತಾ ಬಂದಿದೆ ಚಿತ್ರದುರ್ಗ ಜಿಲ್ಲೆ, ಅತ್ಯಂತ ಹಿಂದುಳಿದ ಜಿಲ್ಲೆಯಾಗಿದ್ದು ಈ ಭಾಗದಲ್ಲಿ ಆರ್ಥಿಕವಾಗಿ ಶೈಕ್ಷಣಿಕವಾಗಿ ಸಾಮಾಜಿಕವಾಗಿ ಪ್ರಗತಿ ಕಾಣುವಲ್ಲಿ ವಿಫಲವಾಗಿದೆ ಇದಕ್ಕೆ ಕಾರಣ ಹೊರಗಿನಿಂದ ಆರಿಸಿ ಹೋದ ಸಂಸದರು ಯಾವುದೇ ಕಾರ್ಯಗಳನ್ನು ಮಾಡುತ್ತಿಲ್ಲ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಥಳೀಯ ವ್ಯಕ್ತಿ ಡಾ. ತಿಪ್ಪೇಸ್ವಾಮಿ ಅವರು ಕಾಂಗ್ರೆಸ್ ಪಕ್ಷದ ವತಿಯಿಂದ ಸ್ಪರ್ಧೆ ಮಾಡಲು ಇಚ್ಛಿಸಿದ್ದು ಇವರಿಗೆ ಸ್ಥಳೀಯ ಸಮಸ್ಯೆಗಳ ಬಗ್ಗೆ ಹೆಚ್ಚಿನ ಜ್ಞಾನವಿದ್ದು ಜಿಲ್ಲೆಗೆ ಯಾವ ಕೆಲಸ ಕಾರ್ಯಗಳು ಆಗಬೇಕು ಎಂಬ ಅರಿವು ಇರುವುದರಿಂದ ಸಂಸದರಾಗಿ ಆಯ್ಕೆಯಾದಲ್ಲಿ ಜಿಲ್ಲೆ ಪ್ರಗತಿ ಕಾಣುವಲ್ಲಿ ಯಾವುದೇ ಅನುಮಾನವಿಲ್ಲ ಆದ್ದರಿಂದ ಜಿಲ್ಲೆಯ ಎಲ್ಲಾ ಶಾಸಕರು ಕೇಂದ್ರ ಹಾಗೂ ರಾಜ್ಯದ ವರಿಷ್ಠರು ಸ್ಥಳೀಯರಾದ ತಿಪ್ಪೇಸ್ವಾಮಿಯವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಗರ ಸಭೆ ಮಾಜಿ ತಾಯಿ ಸಮಿತಿ ಅಧ್ಯಕ್ಷ ಚೇತನ್ ಕುಮಾರ್, ಅಶೋಕ್ ಗೌಡ, ಟಿ ಗಿರಿಯಪ್ಪ, ಮೂಡಲಗಿರಿಯಪ್ಪ ಶಿವಮೂರ್ತಿ, ರಾಜಶೇಖರ, ಚೆನ್ನಗಾನಹಳ್ಳಿ ರುದ್ರಮುನಿ, ಕೆಟಿ ಮೋಹನ್ ಕುಮಾರ, ದ್ಯಾವರನಹಳ್ಳಿ ತಿಪ್ಪೇಸ್ವಾಮಿ, ತಿಪ್ಪೆರುದ್ರಪ್ಪ , ಜಗದೀಶ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Namma Challakere Local News
error: Content is protected !!