ಚಳ್ಳಕೆರೆ : ನಗರದ ಶ್ರೀ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀ ವಾಲ್ಮೀಕಿ ಸಿರಿ-2023ರ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ ರಘುಮೂರ್ತಿ ಪಾಲ್ಗೊಂಡು ಮಾತನಾಡಿದರು.
ಚಳ್ಳಕೆರೆ ನಾಯಕರ ವಿದ್ಯಾರ್ಥಿ ನಿಲಯ ಹಾಗೂ ವಾಲ್ಮೀಕಿ ಕಲ್ಯಾಣ ಮಂಟಪ ಟ್ರಸ್ಟ್, ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘ, ಮತ್ತು ಮಹಿಳಾ ಸಂಘದ ವತಿಯಿಂದ ನಗರದ ಶ್ರೀ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ನಡೆದ ಸಚಿವರು, ಶಾಸಕರುಗಳಿಗೆ ಸನ್ಮಾನ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಶಾಸಕ ಎನ್.ವೈ. ಗೋಪಾಲಕೃಷ್ಣ, ವಾಲ್ಮೀಕಿ ಕಲ್ಯಾಣ ಮಂಟಪದ ಅಧ್ಯಕ್ಷ ಮಲ್ಲಪ್ಪ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸುರೇಶ್, ಬೆಸ್ಕಾಂ ಅಧಿಕಾರಿಗಳಾದ ರಾಜಣ್ಣ, ಡಿ.ವೈ.ಎಸ್.ಪಿ. ರಾಜಣ್ಣ, ರೈತ ಸಂಘದ ಭೂತಯ್ಯ, ನಗಸಭೆ ಸದಸ್ಯರುಗಳು, ಸಮುದಾಯದ ನಿವೃತ್ತ ನೌಕರರು, ಪ್ರತಿಭಾವಂತ ವಿದ್ಯಾರ್ಥಿಗಳು, ಸಮುದಾಯದ ಮಹಿಳಾ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಸಮುದಾಯದವರು ಉಪಸ್ಥಿತರಿದ್ದರು.