ಚಿತ್ರದುರ್ಗ(ಕರ್ನಾಟಕ ವಾರ್ತೆ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ವಿವಿಧ ಕ್ರೀಡಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಚಿತ್ರದುರ್ಗ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟನಾ ಸಮಾರಂಭವನ್ನು ಸೆಪ್ಟೆಂಬರ್ 23ರಂದು ಬೆಳಿಗ್ಗೆ 10.30 ಗಂಟೆಗೆ ಚಿತ್ರದುರ್ಗ ನಗರದ ವೀರ ವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಘನ ಉಪಸ್ಥಿತಿವಹಿಸುವರು. ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕ್ರೀಡಾಜ್ಯೋತಿ ಉದ್ಘಾಟನೆ ನೆರವೇರಿಸುವರು. ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಡಾ.ಎಂ.ಚಂದ್ರಪ್ಪ, ಎನ್.ವೈ.ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಡಾ.ವೈ.ಎ.ನಾರಾಯಣಸ್ವಾಮಿ, ಚಿದಾನಂದ ಎಂ ಗೌಡ, ಕೆ.ಎಸ್.ನವೀನ್ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂಧರ್ ಕುಮಾರ್ ಮೀನಾ ಭಾಗವಹಿಸಲಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಸುಚೇತಾ ಎಂ ನೆಲವಿಗಿ ತಿಳಿಸಿದ್ದಾರೆ.