ಚಿತ್ರದುರ್ಗ : ಕಾವೇರಿ ನಮ್ಮವಳು, ನಮ್ಮ ರಾಜ್ಯದಿಂದ ತಮಿಳುನಾಡಿಗೆ ನೀರು ಬಿಡಬಾರದು, ನಮಗೆ ಕುಡಿಯುವ ನೀರಿಗೆ ಹಾಹಾಕಾರವಿದೆ, ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುವುದು ಸರಿಯಲ್ಲ ಇದರ ಬಗ್ಗೆ ಚಾಕಾರ ಎತ್ತದೆ ಇರುವ ಜನಪ್ರತಿನಿಧಿಗಳ ನಿಲುವು ಖಂಡನೀಯ ಎಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ನೇತೃತ್ವದಲ್ಲಿ ಇಂದು ಜಿಪಂ ಕಚೇರಿಯಲ್ಲಿ ಇರುವ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ಎ.ನಾರಾಯಣಸ್ವಾಮಿ ಕಚೇರಿ ಮುಂದೆ ದಿಕ್ಕಾರ ಕೂಗುತ್ತ ಪ್ರತಿಭಟನೆ ಘೋಷಣೆಗಳನ್ನು ಕೂಗಿದರು.
ಇನ್ನೂ ಕರುನಾಡ ವಿಜಯ ಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಮಾಧ್ಯಮದೊಂದಿಗೆ ಮಾತನಾಡಿ, ರಾಜ್ಯದಲ್ಲಿ ಮಳೆ ಯಾಗದ ಕಾರಣ ರೈತರು ಸಂಕಷ್ಟದಲ್ಲಿದ್ದಾರೆ ಇಂತಹ ಸಂದರ್ಭದಲ್ಲಿ ಕಾವೇರಿ ನದಿ ನೀರು ನಿರ್ವಹಣೆ ಪ್ರಾಧಿಕಾರ ತಮಿಳುನಾಡಿಗೆ 5000 ಕ್ಯೂಸಿಕ್ ನೀರು ಹರಿಸಲು ಆದೇಶಿಸಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯದಾದ್ಯಂತ ಕರುನಾಡು ವಿಜಯ ಸೇನೆವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಇದೇ ಸಂಧರ್ಭದಲ್ಲಿ ಕರುನಾಡ ವಿಜಯಸೇನೆಯ ಅನೇಕ ಪದಾಧಿಕಾರಿಗಳು, ಪಾಲ್ಗೊಂಡಿದ್ದರು.