ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ಶಾಸಕರ ಭವನಕ್ಕೆ ಆಗಮಿಸಿದ ಸಿರಿಗೆರೆ ಜಗದ್ಗುರು ಶ್ರೀ ಶ್ರೀ ಡಾ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿರವರನ್ನು ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರ ಮತ್ತು ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷರಾದ ಶ್ರೀ ಬಿ.ಎನ್.ಚಂದ್ರಪ್ಪ ರವರನ್ನು ಸನ್ಮಾನಿಸಿ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ಶಶಿಧರ, ನಗರಸಭೆ ಸದಸ್ಯರುಗಳು, ಮುಖಂಡರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.