ಚಳ್ಳಕೆರೆ : ಮುಂಬರುವ 2024 ರ ಚಿತ್ರದುರ್ಗ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾದ ಡಾ. ಜೆ.ಜೆ ಹಟ್ಟಿ ತಿಪ್ಪೇಸ್ವಾಮಿ ಕೋಡಿಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಸಂಘದ ಯುವಕರು ಆಯೋಜಿಸಿದ್ದ ಗಣೇಶೋತ್ಸವ ಸಮಾರಂಭದಲ್ಲಿ ಭಾಗವಹಿಸಿ ದೇವರ ಆರ್ಶಿವಾದ ಪಡೆದರು.
ಇನ್ನೂ ಸಮುದಾಯದ ಯುವಕರನ್ನು ಉದ್ದೇಶಿಸಿ ಮಾತನಾಡಿದ ಅವರು ಯುವಕರು ಇಂತಹ ದೇವರ ಉತ್ಸವಗಳನ್ನು ಮಾಡುವ ಮೂಲಕ ಸಮಾಜ ಒಗ್ಗೂಡಿಸಬೇಕು, ಎಂದು ಕಿವಿಮಾತು ಹೇಳಿದರು.
ಇದೇ ಸಂಧರ್ಭದಲ್ಲಿ ಸಮುದಾಯದ ಹಲವು ಮುಖಂಡರು ಪಾಲ್ಗೊಂಡಿದ್ದರು.