ಚಳ್ಳಕೆರೆ ಅ.1. ದೇಶದ ಆರ್ಥಿಕ ಬೆಳವಣಿಗೆಗೆ ನೊಗ ಹೊತ್ತವರು. ದುಡಿಯುವ ಶಕ್ತಿ ಕುಂಠಿತಗೊAಡರೂ ಅವರು ಯಾವತ್ತಿದ್ದರೂ ದೇಶದ ಆಸ್ತಿ ಎಂದು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ತಾಪಂ ಇಒ ಹೊನ್ನಯ್ಯ ಅಭಿಪ್ರಾಯಪಟ್ಟರು.
ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ತಾಲ್ಲೂಕು ಉನಾವಣೆ ಶಾಖೆವತಿಯಿಂದ. ಅಕ್ಟೋಬರ್-1 ಅಂತರಾಷ್ಟ್ರೀಯ ಹಿರಿಯ ವ್ಯಕ್ತಿಗಳ ದಿನಾಚರಣೆಯ ಅಂಗವಾಗಿ ಶತಾಯುಷಿ ಮತದಾರರಿಗೆ ಗೌರವಿಸಿ ಸನ್ಮಾನಿಸಿ ಮಾತನಾಡಿದರು. ಇಂತಹ ಹಿರಿಯರಿಗಾಗಿ ಸರಕಾರ ಜಾರಿಗೆ ತಂದಿರುವ ದಿನಾಚರಣೆಯನ್ನು ಅವರಿಗಾಗಿ ಒಂದು ದಿನವನ್ನು ಮುಡಿಪಾಗಿಟ್ಟು ಆಚರಿಸುವುದು ಹೊಸ ತಲೆಮಾರಿನವರ ಭಾಗ್ಯ ಹಾಗೂ ಕರ್ತವ್ಯ.
ಇಂದಿನ ವೇಗದ ಜೀವನ, ಅಥವಾ ಹಾಗೆ ವೇಗವಾಗಿ ಸಾಗುತ್ತಿದ್ದೇವೆಂಬ ಭ್ರಮೆಯಲ್ಲಿ ನಡೆಯುತ್ತಿರುವ ಈ ಲೋಕದಲ್ಲಿ ಮುಮ್ಮಲ ಮರುತ್ತಿರುವುದು ಹೆಚ್ಚಾಗಿ ಹಿರಿಯ ಜೀವಗಳೇ. ಯುವಜನರು ಸಂಪಾದನೆಯ ಬೇಟೆಗೆ ಬಿದ್ದು ಊರು ತೊರೆದು ಹೋಗುವ ಅಥವಾ ಸಂಗಾತಿಯ ಮಾತಿಗೆ ಕಟ್ಟುಬಿದ್ದು ಕುಟುಂಬ ತೊರದು ಹೋಗುವ ಪ್ರವೃತ್ತಿ ಅಥವಾ ಪರಿಸ್ಥಿತಿ ಹೆಚ್ಚುತ್ತಿದೆ. ಇದರಿಂದ ಬಾಧಿತವಾಗಿರುವ ವೃದ್ಧರ ಗೋಳನ್ನು ವಿವರಿಸುವುದು ಕಷ್ಟಸಾಧ್ಯ ಹೆತ್ತು ಹೊತ್ತು ಸಾಕಿದ ವೃದ್ಧ ಹಿರಿಯರನ್ನು ವೃದ್ದಾಶ್ರಮಗಳಿಗೆ ಸೇರಿಸಿತ್ತಿರುವ ಪದ್ದತಿ ಇಂದಿಗೂ ಜೀವಾಂತವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ತಹಶೀಲ್ದಾರ್ ರೇಹಾನ್ ಪಾಷ ಮಾತನಾಡಿ, ನಮ್ಮ ಬದುಕಿಗೆ ದಾರಿ ಮಾಡಿಕೊಟ್ಟ ಹಿರಿಯ ನಾಗರಿಕರ ಕೊನೆಗಾಲದ ಬದುಕನ್ನು ಹಸನುಗೊಳಿಸುವುದು ಪ್ರತಿಯೊಬ್ಬ ಯುವಜನರ ಕರ್ತವ್ಯ. ಅಕ್ಟೋಬರ್ 1 ರ ಈ ದಿನವನ್ನುವಿಶ್ವ ನಾಗರೀಕರ ದಿನಾಚರಣೆಯನ್ನಾಗಿ ಆಚರಣೆ ಮಾಡುತ್ತಿದ್ದು ಶತಾಯುಷಿ ಹಿರಿಯ ನಾಗರಿಕರ ಬಗ್ಗೆ ಯುವಜನರಲ್ಲಿ ಜಾಗೃತಿ ಮೂಡಿಸುವ ಮತ್ತು ಅರಿವು ಮೂಡಿಸುವ ಕೆಲಸ ಆಗಬೇಕುವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಚುನಾವಣೆ ಆಯೋಗದ ವತಿಯಿಂದ 100ವರ್ಷ ಪೂರೈಸಿದ ಶತಾಯುಷಿ ಮತದಾರರನ್ನು
ಸನ್ಮಾನಿಸಲಾಯಿತು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪೌರಾಯುಕ್ತ ಚಂದ್ರಪ್ಪ ಹಾಗೂ ಮತಗಟ್ಟೆ ಅಧಿಕಾರಿಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!