ಚಳ್ಳಕೆರೆ : ಅ.5ರಂದು ಸಾರ್ವಜನಿಕ ಕುಂದು ಕೊರತೆಗಳ ಸಭೆಯನ್ನು ಕಸಬಾ ಹೋಬಳಿ ವ್ಯಾಪ್ತಿಯ ಸಾಣೀಕೆರೆ ಗ್ರಾಮದ ಪೋಲಿಸ್ ಠಾಣೆ ಪಕ್ಕದ ಆವರದಲ್ಲಿ 10-30 ಸಮಕ್ಕೆ ಹಾಗೂ ಬೆಳೆಗೆರೆ ಗ್ರಾಮದಲ್ಲಿ ಗ್ರಾಪಂ ಕಚೇರಿ ಆವರಣದಲ್ಲಿ ಮಧ್ಯಾಹ್ನ 12.30ಕ್ಕೆ ಸರಿಯಾಗಿ ಸಾರ್ವಜನಿಕ ಕುಂದು ಕೊರತೆಗಳ ನಿವಾರಣೆಗಾಗಿ ಸಭೆಯನ್ನು ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿರುತ್ತದೆ.
ಸದರಿ ಸಭೆಗೆ ಯಾವುದೇ ಅಧೀನ ಸಿಬ್ಬಂದಿಯನ್ನು ನಿಯೋಜಿಸದೆ ಇಲಾಖಾ ಮಾಹಿತಿಯೊಂದಿಗೆ ಕಡ್ಡಾಯವಾಗಿ ತಾಲ್ಲೂಕು ಮಟ್ಟದ ಪ್ರತಿಯೊಬ್ಬ ಅಧಿಕಾರಿಗಳು ಖುದ್ದಾಗಿ ಹಾಜರಾಗಲು ಕೋರಿದ್ದಾರೆ.
ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಹಾಜರಿಯಾಗುವಂತೆ ತಾಪಂ ಇಒ.ಹೊನ್ನಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.