ಇದೇ ಸಂದರ್ಭದಲ್ಲಿ ಎಎಸ್ಪಿ. ಆರ್ ಶಿವಕುಮಾರ್, ಡಿವೈಎಸ್ಪಿ ರಾಜಣ್ಣ, ತಳಕು ಮತ್ತು ನಾಯಕನಹಟ್ಟಿ ವೃತ್ತ ನಿರೀಕ್ಷಕ ಹನುಮಂತಪ್ಪ ಎಂ.ಶೀರೆಹಳ್ಳಿ, ನಾಯಕನಹಟ್ಟಿ ಪೊಲೀಸ್ ಠಾಣೆಯ ಪಿಎಸ್ಐ ಪಾಂಡುರಂಗಪ್ಪ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಇದ್ದರು
ನಾಯಕನಹಟ್ಟಿ ಪಟ್ಟಣದಲ್ಲಿ ನಾಳೆ ಹಿಂದೂ ಮಹಾ ಗಣಪತಿ ವಿಸರ್ಜನೆ ಪ್ರಯುಕ್ತ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭಂಡಾರು ನೇತೃತ್ವದಲ್ಲಿ ಬುಧವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಸುವ ಮೂಲಕ ಜಾಗೃತಿ ಮೂಡಿಸಲಾಯಿತು.

