ಹೊಸಮದ್ಯದಂಗಡಿಗಳಿಗೆ ಪರವಾನಿಗೆ ನೀಡುವುದಿಲ್ಲ : ಸಿಎಂ.ಸಿದ್ದರಾಮಯ್ಯ
ಚಿತ್ರದುರ್ಗ : ಈಗಿರುವ ಮದ್ಯದಂಗಡಿಗಳ ಹೊರತಾಗಿ ಹೊಸದಾಗಿ ಯಾವುದೇ ಮದ್ಯದಂಗಡಿಗಳನ್ನು ತೆರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು
ಚಿತ್ರದುರ್ಗ ನಗರದಲ್ಲಿ ಶುಕ್ರವಾರ ಬಬ್ಬೂರಿಗೆ ಕೃಷಿ ಸಂಶೋಧನಾ ಕೇಂದ್ರದ ಶತಮಾನೋತ್ಸವ ಸಮಾರಂಭಕ್ಕೆ ತೆರಳುವ ಮೊದಲು ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವೇಳೆ ಅಬಕಾರಿ ಸಚಿವರು ರಾಜ್ಯದಲ್ಲಿ 1000 ಮದ್ಯದಂಗಡಿಗಳನ್ನು ತೆರೆಯುವ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದರು. ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಒಂದು ಅಪವಿತ್ರ ಮೈತ್ರಿ ಎಂದ ಅವರು, ಮೊದಲಿನಿಂದಲೂ ನಾವು ಜಾತ್ಯತೀತರು ಎಂದು ಹೇಳುತ್ತ ಬಂದಿರುವ ಜೆಡಿಎಸ್ ರಾಜ್ಯದಲ್ಲಿ ತನ್ನ ಅಸ್ಥಿತ್ವ ಕಳೆದುಕೊಳ್ಳುತ್ತಿದೆ. ಇದರಿಂದ ಪಕ್ಷದ ತತ್ವ ಸಿದ್ದಾಂತಗಳನ್ನು ಗಾಳಿಗೆ ತೂರಿ, ಕೋಮುವಾದಿ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ ಎಂದರು.

ರಾಜ್ಯದ ಆರ್ಥಿಕ ಸ್ಥಿತಿಯನ್ನು ಹಾಳು ಮಾಡಿರುವುದು ಬಿಜೆಪಿ. ಅವರಿಗೆ ರಾಜ್ಯದ ಆರ್ಥಿಕತೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ದಿ ಕಾರ್ಯಗಳಿಗೆ ಹಣ ಕೊರತೆ ಇಲ್ಲ. ಅದೇ ರೀತಿ ನಮ್ಮ ಪಕ್ಷ ನೀಡಿರುವ ಐದು ಗ್ಯಾರೆಂಟಿಗಳಿಗೂ ಹಣದ ಕೊರತೆಯಿಲ್ಲ. ಆದರೆ ನಮ್ಮ ಶಾಸಕರು ಹೆಚ್ವಿನ ಅನುಧಾನ ಬೇಕು ಎಂದು ಕೇಳುತ್ತಿದ್ದಾರೆ ಅಷ್ಟೇ. ಅದನ್ನು ಕೂಡ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದರು

About The Author

Namma Challakere Local News
error: Content is protected !!