ಚಳ್ಳಕೆರೆ/ಚಿತ್ರದುರ್ಗ : ಹಿಂದಿನ ರಾಜ್ಯ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ, 5,300 ಕೋಟಿ ರೂ. ಬಿಡುಗಡೆ ಮಾಡಲಿದೆ ಎಂದಿದ್ದರು. ಆದರೆ ಇದುವರೆಗೆ ಕೇಂದ್ರದಿAದ ಯಾವುದೇ ಹಣ ಬಿಡುಗಡೆಯಾಗಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಚಿತ್ರದುರ್ಗದ ಮುರುಘಾಮಠದ ಆವರಣದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಮುಖ್ಯಮಂತ್ರಿ ‘ರಾಜ್ಯದಲ್ಲಿ ಬರಪರಿಸ್ಥಿತಿಯಿಂದ ಸುಮಾರು 30 ಸಾವಿರ ಕೋಟಿ ರೂ. ಬೆಳೆಹಾನಿಯಾಗಿದೆ. ಓಆಖಈ ಮಾರ್ಗಸೂಚಿಯಂತೆ 4,860 ಕೋಟಿ ರೂ. ಪರಿಹಾರವನ್ನು ಕೋರಲಾಗಿದ್ದು, ಈ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರವನ್ನು ಒತ್ತಾಯಿಸಿದ್ದೇವೆ ಎಂದು ಹೇಳಿದ್ದಾರೆ.ಕೃಷ್ಣಾ ಮೇಲ್ದಂಡೆ ಹಾಗೂ ನಾರಾಯಣಪುರ ಜಲಾಶಯಗಳನ್ನು ಹೊರತುಪಡಿಸಿ, ಕಾವೇರಿ ಸೇರಿದಂತೆ ಇನ್ನುಳಿದ ಜಲಾನಯನ ಪ್ರದೇಶಗಳಲ್ಲಿ ನೀರಿನ ಸಂಗ್ರಹವಿಲ್ಲ. ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ 4,860 ಕೋಟಿ ರೂ.ಗಳ ಪರಿಹಾರವನ್ನು ಕೇಂದ್ರದಿAದ ಕೋರಲಾಗಿದೆ. ಈ ಬಾರಿ ಹಸಿರು ಬರ ಉಂಟಾಗಿದೆ. ಕೇಂದ್ರದ ಅಧ್ಯಯನ ತಂಡ ಮೂರು ತಂಡಗಳಲ್ಲಿ ರಾಜ್ಯದ 11 ಜಿಲ್ಲೆಗಳಿಗೆ ಭೇಟಿ ನೀಡುತ್ತಿದೆ. ಅವರು ಕೇಂದ್ರಕ್ಕೆ ವರದಿ ಸಲ್ಲಿಸಿದ ನಂತರ, ವರದಿ ಆಧರಿಸಿದಂತೆ ಕೇಂದ್ರ ಪರಿಹಾರ ನೀಡಲಿದೆ.” ಎಂದು ಹೇಳಿದ್ದಾರೆ.
ರಾಜ್ಯದ ಬರಪರಿಸ್ಥಿತಿಯ ಅಧ್ಯಯನಕ್ಕಾಗಿ ಕೇಂದ್ರ ಬರ ಅಧ್ಯಯನ ತಂಡ ಆಗಮಿಸಿದೆ. ಕೇಂದ್ರದ ಅಧ್ಯಯನ ತಂಡಕ್ಕೆ ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯ ವಸ್ತುಸ್ಥಿತಿಯನ್ನು ಈಗಾಗಲೇ ವಿವರಿಸಲಾಗಿದೆ. ಒಟ್ಟು 236 ತಾಲ್ಲೂಕುಗಳಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಸುಮಾರು 30 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಬೆಳೆಹಾನಿ ಸಂಭವಿಸಿದೆ. 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ಶೇ. 52 ರಷ್ಟು ಬೆಳೆಹಾನಿಯಾಗಿದೆ ಎಂದು ತಿಳಿಸಿದರು.
ಹೊಸಮದ್ಯದಂಗಡಿಗಳಿಗೆ ಪರವಾನಿಗೆ ನೀಡುವುದಿಲ್ಲ
ಈಗಿರುವ ಮದ್ಯದಂಗಡಿಗಳ ಹೊರತಾಗಿ ಹೊಸದಾಗಿ ಯಾವುದೇ ಮದ್ಯದಂಗಡಿಗಳನ್ನು ತೆರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು
ಚಿತ್ರದುರ್ಗ ನಗರದಲ್ಲಿ ಶುಕ್ರವಾರ ಬಬ್ಬೂರಿಗೆ ಕೃಷಿ ಸಂಶೋಧನಾ ಕೇಂದ್ರದ ಶತಮಾನೋತ್ಸವ ಸಮಾರಂಭಕ್ಕೆ ತೆರಳುವ ಮೊದಲು ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವೇಳೆ ಅಬಕಾರಿ ಸಚಿವರು ರಾಜ್ಯದಲ್ಲಿ 1000 ಮದ್ಯದಂಗಡಿಗಳನ್ನು ತೆರೆಯುವ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದರು. ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಒಂದು ಅಪವಿತ್ರ ಮೈತ್ರಿ ಎಂದ ಅವರು, ಮೊದಲಿನಿಂದಲೂ ನಾವು ಜಾತ್ಯತೀತರು ಎಂದು ಹೇಳುತ್ತ ಬಂದಿರುವ ಜೆಡಿಎಸ್ ರಾಜ್ಯದಲ್ಲಿ ತನ್ನ ಅಸ್ಥಿತ್ವ ಕಳೆದುಕೊಳ್ಳುತ್ತಿದೆ. ಇದರಿಂದ ಪಕ್ಷದ ತತ್ವ ಸಿದ್ದಾಂತಗಳನ್ನು ಗಾಳಿಗೆ ತೂರಿ, ಕೋಮುವಾದಿ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ ಎಂದರು.
ರಾಜ್ಯದ ಆರ್ಥಿಕ ಸ್ಥಿತಿಯನ್ನು ಹಾಳು ಮಾಡಿರುವುದು ಬಿಜೆಪಿ. ಅವರಿಗೆ ರಾಜ್ಯದ ಆರ್ಥಿಕತೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ದಿ ಕಾರ್ಯಗಳಿಗೆ ಹಣ ಕೊರತೆ ಇಲ್ಲ. ಅದೇ ರೀತಿ ನಮ್ಮ ಪಕ್ಷ ನೀಡಿರುವ ಐದು ಗ್ಯಾರೆಂಟಿಗಳಿಗೂ ಹಣದ ಕೊರತೆಯಿಲ್ಲ. ಆದರೆ ನಮ್ಮ ಶಾಸಕರು ಹೆಚ್ವಿನ ಅನುಧಾನ ಬೇಕು ಎಂದು ಕೇಳುತ್ತಿದ್ದಾರೆ ಅಷ್ಟೇ. ಅದನ್ನು ಕೂಡ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದರು.
ಶಿವಮೊಗ್ಗಕ್ಕೆ ಬಿಜೆಪಿಯವರು ಸತ್ಯ ಶೋಧನೆ ಮಾಡಲು ಹೋಗಿದ್ದಾರೆ. ಸತ್ಯ ಶೋಧನೆ ಎಂದರೆ ಏನು? ಯಾವುದರ ಬಗ್ಗೆ ಸತ್ಯ ಶೋಧನೆ ಮಾಡುತ್ತಾರೆ ಎಂದು ಪ್ರಶ್ನಿಸಿದ ಅವರು, ಮುಸ್ಲೀಂ ಸಮುದಾಯ ಮೆರವಣಿಗೆ ಮಾಡುವಾಗ ಯಾರೋ ಕಿಡಿಗೇಡಿಗಳು ಕಲ್ಲು ಎಸೆದಿದ್ದಾರೆ. ಅದನ್ನು ಯಾರು ಎಸೆದಿದ್ದಾರೆ ಎಂಬುದನ್ನು ಪತ್ತೇ ಹಚ್ಚುವಂತೆ ಪೊಲೀಸರಿಗೆ ಸೂಚನೆ ನೀಡಿದ್ದು, ತಪ್ಪು ಮಾಡಿದವರು ಯಾವ ಜಾತಿಯವರೇ ಆಗಿರಲಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೆನೆ. ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದರು.
ರಾಜ್ಯದ 236 ತಾಲ್ಲೂಕುಗಳಲ್ಲಿ 195 ಬರಗಾಲ ಎಂದು ಘೋಷಣೆ ಮಾಡಲಾಗಿದೆ. ರಾಜ್ಯದ 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು 30 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಬೆಳೆ ಹಾನಿಯಾಗಿದೆ. ಕೇಂದ್ರ ಸರ್ಕಾರದ ಮಾನದಂಡದ ಪ್ರಕಾರ ಪರಿಹಾರ ಕೇಳಿದ್ದೆವೆ. ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಿದ್ದು, 11 ಜಿಲ್ಲೆಗಳಿಗೆ ಭೇಟಿ ಮಾಡಿ, ವರದಿ ನೀಡುತ್ತಾರೆ. ಅದರ ಆಧಾರದ ಮೇಲೆ ಪರಿಹಾರ ನೀಡುತ್ತಾರೆ. ಕೇಂದ್ರ ಸರ್ಕಾರದ ಮಾನದಂಡದAತೆ 4960 ಕೋಟಿ ಬೆಳೆ ಹಾನಿ ಪರಿಹಾರ ನೀಡುವಂತೆ ಕೇಳಿದ್ದು, ಅದನ್ನು ನೀಡುವ ಭರವಸೆ ಇದೆ ಎಂದು ಹೇಳಿದರು.
ಅಪ್ಪರ್ ಭದ್ರ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿ 5300 ಕೋಟಿ ಬಜೆಟ್ ನಲ್ಲಿ ನೀಡಿದ್ದಾರೆ ಅದರಂತೆ ನಮಗೆ ನೀಡಬೇಕು. ಈ ಬಗ್ಗೆ ನಾವು ಪತ್ರ ಬರೆದಿದ್ದು, ಶೀಘ್ರವೇ 5300 ಕೋಟಿ ಬಿಡುಗಡೆ ಮಾಡಬೇಕು ಎಂದು ಒತ್ತಾಯ ಮಾಡಿದ್ದೆವೆ ಎಂದರು