ಚಿತ್ರದುರ್ಗ :
2023-24ನೇ ಸಾಲಿನ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ (ಎಸ್‍ಎಸ್‍ಪಿ ಪೋರ್ಟಲ್) ಮೆಟ್ರಿಕ್ ನಂತರ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಅರ್ಹ ವಿಕಲಚೇತನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕಾಲೇಜು, ಶಿಕ್ಷಣ ಸಂಸ್ಥೆಗಳ ಮುಖಾಂತರ ಆನ್‍ಲೈನ್ ಮೂಲಕ ವೆಬ್‍ಸೈಟ್ https://ssp.postmatric.karnata.gov.in ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ಒಂದು ಪ್ರತಿಯನ್ನು ಆಯಾ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರು ಅಥವಾ ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ, ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರ ದೂರವಾಣಿ ಸಂಖ್ಯೆ ಚಿತ್ರದುರ್ಗ-9880821934, ಚಳ್ಳಕೆರೆ-9611266930, ಹಿರಿಯೂರು-9902888901, 9902898901, ಹೊಳಲ್ಕೆರೆ-9740030227, ಹೊಸದುರ್ಗ-9741829990, ಮೊಳಕಾಲ್ಮೂರು-9742725576, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ 08194-235284 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

About The Author

Namma Challakere Local News
error: Content is protected !!