ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.7:
ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ.ಚಂದ್ರಶೇಖರ್ ಕಂಬಾಳಿಮಠ ಅವರ ಮಾರ್ಗದರ್ಶನದಲ್ಲಿ ಕೋಟ್ಪಾ-2003ರ ಕಾಯ್ದೆಯ ಕುರಿತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಶುಕ್ರವಾರ ಹೊಳಲ್ಕೆರೆ ನಗರ ಪ್ರದೇಶಗಳಲ್ಲಿ ಜಿಲ್ಲಾ ಮಟ್ಟದ ತಂಬಾಕು ತನಿಖಾ ತಂಡವು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ಭೇಟಿ ನೀಡಿ ದಾಳಿ ನಡೆಸಿತು.
ಸಾರ್ವಜನಿಕರಲ್ಲಿ ಮತ್ತು ಅಂಗಡಿ ಮಾಲೀಕರಿಗೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಉಗಿಯದಂತೆ ಎಚ್ಚರಿಸಿ ಜಾಗೃತಿ ಮೂಡಿಸಲಾಯಿತು. ಸಂಬಂಧಪಟ್ಟ ಸೆಕ್ಷನ್-4, 6ಎ ಮತ್ತು 6ಬಿ ಬೋರ್ಡ್‍ಗಳನ್ನು ಹಾಕಲು ಸೂಚಿಸಲಾಯಿತು. ಸೆಕ್ಷನ್-4 ಅಡಿಯಲ್ಲಿ 06 ಕೇಸುಗಳನ್ನು ದಾಖಲಿಸಿ ರೂ. 950 ದಂಡ ಮತ್ತು ಸೆಕ್ಷನ್-6ಎ ಅಡಿಯಲ್ಲಿ 03 ಕೇಸುಗಳನ್ನು ದಾಖಲಿಸಿ ರೂ. 350 ದಂಡ ವಸೂಲಿ ಮಾಡಲಾಯಿತು.
ತಂಬಾಕು ದಾಳಿಯಲ್ಲಿ ತನಿಖಾ ತಂಡದ ಅಧಿಕಾರಿಗಳಾದ ತಹಶೀಲ್ದಾರ್ ಬಿ.ಬಿ.ಫಾತಿಮಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರೇಖಾ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ್, ಪುರಸಭೆ ಮುಖ್ಯಾಧಿಕಾರಿ ವಾಸಿಂ, ಜಿಲ್ಲಾ ಸರ್ವೇಕ್ಷಣ ಘಟಕದ ಡಾಟಾ ಮ್ಯಾನೇಜರ್ ಎಸ್.ಮಧು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಕೆ.ರಂಗನಾಥ್ ಇದ್ದರು.

Namma Challakere Local News
error: Content is protected !!