ಚಳ್ಳಕೆರೆ : ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಸಾನಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಚರಿಸಲಾಯಿತು.
ಇನ್ನೂ ಕಾರ್ಯಕ್ರದಮಲ್ಲಿ ಸಾಣಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ. ನಾಗರಾಜ್ ಮಾತನಾಡಿ, ಮನುಷ್ಯನ ಆರೋಗ್ಯಕರ ಜೀವನಕ್ಕೆ ಅವನ ಸುರಕ್ಷತೆಯೇ ಅವನ ಕೈ ಗನ್ನಡಿಯಂತೆ ಅದ್ದರಿಂದ ಮನುಷ್ಯ ಮಾನಸಿಕವಾಗಿ ಕುಂದದೆ ಲವಲವಿಕೆಯಿಂದ ಆರೋಗ್ಯಕರ ಜೀವನ ನಡೆಸಬೇಕು ಎಂದರು.
ಈದೇ ಸಂಧರ್ಭದಲ್ಲಿ ಸಾಣಿಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ್, ಉಪಾಧ್ಯಕ್ಷರಾದ ಶಶಿಕಲಾ, ಸಾಣಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ. ನಾಗರಾಜ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ದೇವರಾಜ್, ಸಾಣಿಕೆರೆ ಗ್ರಾಮ ಪಂಚಾಯಿತಿ ಸದಸ್ಯರುಗಳು, ಆಸ್ಪತ್ರೆ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಪಂಚಾಯತಿ ಸಿಬ್ಬಂದಿ ವರ್ಗದವರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹಾಜರಿದ್ದರು.

Namma Challakere Local News
error: Content is protected !!